ಶನಿವಾರ, ಮಾರ್ಚ್ 25, 2023
22 °C

ಬಾಂಗ್ಲಾದೇಶ, ತ್ರಿಪುರಾ ಸಂಘರ್ಷ: ಅಮೆರಿಕ ಸಂಸತ್‌ ಕಳವಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಾಷಿಂಗ್ಟನ್‌: ಭಾರತದ ತ್ರಿಪುರಾ ರಾಜ್ಯ ಮತ್ತು ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಕೋಮು ಸಂಘರ್ಷಗಳ ಬಗ್ಗೆ ಅಮೆರಿಕದ ಸಂಸತ್‌ ಸದಸ್ಯ ಆ್ಯಂಡಿ ಲೆವಿನ್‌ ಕಳವಳ ವ್ಯಕ್ತಪಡಿಸಿದ್ದಾರೆ.

‘ಬಾಂಗ್ಲಾದೇಶ ಮತ್ತು ಭಾರತದ ತ್ರಿಪುರಾದಲ್ಲಿನ ಹಿಂದೂಗಳು ಮತ್ತು ಮುಸ್ಲಿಮರ ನಡುವಿನ ನಿರಂತರ ಹಿಂಸಾಚಾರದ ಸುದ್ದಿಯಿಂದ ನಾನು ತೀವ್ರ ಕಳವಳಗೊಂಡಿದ್ದೇನೆ’ ಎಂದು ಕಾಂಗ್ರೆಸ್‌ ಸದಸ್ಯ ಆ್ಯಂಡಿ ಲೆವಿನ್‌ ಟ್ವೀಟ್‌ವೊಂದರಲ್ಲಿ ಹೇಳಿದ್ದಾರೆ. 

ಸಾಮಾಜಿಕ ಮಾಧ್ಯಮದಲ್ಲಿ ಧರ್ಮನಿಂದನೆಯ ಪೋಸ್ಟ್‌ವೊಂದನ್ನು ಮಾಡಿದ ಆರೋಪದಲ್ಲಿ ಅಕ್ಟೋಬರ್‌ ಮಧ್ಯಭಾಗದಲ್ಲಿ ಬಾಂಗ್ಲಾದೇಶದಲ್ಲಿ ದುರ್ಗಾ ಪೂಜೆಯ ವೇಳೆ ಉದ್ರಿಕ್ತ ಗುಂಪು ಹಿಂದೂ ದೇವಾಲಯಗಳು ಮತ್ತು ಮನೆಗಳ ಮೇಲೆ ದಾಳಿ ಮಾಡಿತ್ತು.  

ಬಾಂಗ್ಲಾದೇಶದಲ್ಲಿನ ದಾಳಿ ಖಂಡಿಸಿ ಅಲ್ಲಿನ ಹಿಂದೂ ಅಲ್ಪಸಂಖ್ಯಾತರಿಗೆ ನ್ಯಾಯಕ್ಕಾಗಿ ಆಗ್ರಹಿಸಿ ತ್ರಿಪುರಾದ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಇದರಿಂದ ರಾಜ್ಯದಲ್ಲಿ ಘರ್ಷಣೆ ಉಂಟಾಗಿತ್ತು.  

ಈ ಹಿಂಸಾಚಾರಗಳಿಗೆ ಸಂಬಂಧಿಸಿದ ವಾಷಿಂಗ್ಟನ್‌ ಪೋಸ್ಟ್‌ನ ಸುದ್ದಿಯನ್ನು ಮರು ಟ್ವೀಟ್‌ ಮಾಡಿರುವ ಅವರು, ‘ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ  ಪ್ರಚೋದನಾಕಾರಿ ಹೇಳಿಕೆಗಳನ್ನು ಖಂಡಿಸಬೇಕು’ ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು