ಎಚ್–1ಬಿ ವೀಸಾ ತಾತ್ಕಾಲಿಕ ರದ್ದು ಪ್ರಶ್ನಿಸಿದ್ದ ಅರ್ಜಿ ವಜಾ

ವಾಷಿಂಗ್ಟನ್: ಎಚ್–1ಬಿ ವೀಸಾವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಿರ್ಧಾರವನ್ನು ಪ್ರಶ್ನಿಸಿದ್ದ ಅರ್ಜಿಯನ್ನು ಅಮೆರಿಕದ ನ್ಯಾಯಾಲಯವೊಂದು ವಜಾಗೊಳಿಸಿದೆ.
ಈ ವೀಸಾದಡಿ ವಿದೇಶಿಗರು ವರ್ಷಾಂತ್ಯದವರೆಗೆ ಅಮೆರಿಕಕ್ಕೆ ಪ್ರವೇಶಿಸುವುದನ್ನು ನಿಷೇಧಿಸಿ ಆದೇಶ ಹೊರಡಲಿಸಲಾಗಿತ್ತು. ಇದನ್ನು ಪ್ರಶ್ನಿಸಿ 169 ಭಾರತೀಯ ನಾಗರಿಕರು ನ್ಯಾಯಾಲಯದ ಮೆಟ್ಟಿಲೇರಿದ್ದರು. ವಿದೇಶಿ ಪರಿಣತ ಕೆಲಸಗಾರರು ಅಮೆರಿಕದಲ್ಲಿ ತಾತ್ಕಾಲಿಕವಾಗಿ ಕಾರ್ಯನಿರ್ವಹಿಸಲು ಅವಕಾಶವನ್ನು ಎಚ್–1ಬಿ ವೀಸಾ ನೀಡುತ್ತದೆ. ಭಾರತ ಮತ್ತು ಚೀನಾ ಸೇರಿದಂತೆ ಹಲವು ರಾಷ್ಟ್ರಗಳಿಂದ ಸಾವಿರಾರು ಉದ್ಯೋಗಿಗಳನ್ನು ಆಯ್ಕೆ ಮಾಡಿಕೊಳ್ಳಲು ಈ ವೀಸಾವನ್ನೇ ಹಲವು ಕಂಪನಿಗಳು ಅವಲಂಬಿಸಿವೆ.
‘ಡಿಎಸ್–160 ವೀಸಾ ಅರ್ಜಿಯ ಪ್ರಕ್ರಿಯೆ ಆರಂಭಿಸಲು ಅರ್ಜಿದಾರರು ಕೋರಿದ್ದಾರೆ. ಆದರೆ 2021ರ ಜ.1ರವರೆಗೆ ಅರ್ಜಿದಾರರು ಅಮೆರಿಕಕ್ಕೆ ಪ್ರವೇಶಿಸಲು ಅರ್ಹರಾಗಿಲ್ಲ. ಹೀಗಾಗಿ ಡಿಎಸ್–160 ಅರ್ಜಿಯ ಪ್ರಕ್ರಿಯೆ ಆರಂಭಿಸಿದರೂ, ಪ್ರಯೋಜವಿಲ್ಲ’ ಎಂದು ಕೊಲಂಬಿಯಾ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ಅಮಿತ್ ಪಿ.ಮೆಹ್ತಾ ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.