ಮಂಗಳವಾರ, ಅಕ್ಟೋಬರ್ 26, 2021
23 °C

ಪಾಕ್‌ನೊಂದಿಗೆ ಅಮೆರಿಕ ಮಾತುಕತೆ: ಪ್ರಾದೇಶಿಕ ಭದ್ರತೆ, ಆರ್ಥಿಕ ವಿಷಯಗಳ ಚರ್ಚೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಇಸ್ಲಾಮಾಬಾದ್‌: ಎರಡು ದಿನಗಳ ಪಾಕಿಸ್ತಾನ ಪ್ರವಾಸದಲ್ಲಿರುವ ಅಮೆರಿಕದ ವಿದೇಶಾಂಗ ಇಲಾಖೆಯ  ಉಪ ಕಾರ್ಯದರ್ಶಿ ವೆಂಡೈ ಶೆರ್ಮನ್ ಅವರು ಪಾಕ್‌ನ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಮೊಯೀದ್‌ ಯೂಸಫ್‌ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.

ಈ ವೇಳೆ ಅಫ್ಗಾನಿಸ್ತಾನದ ಪರಿಸ್ಥಿತಿ ಸೇರಿದಂತೆ ಪ್ರಾದೇಶಿಕ ಭದ್ರತಾ ವಿಷಯಗಳು ಹಾಗೂ ದ್ವಿಪಕ್ಷೀಯ ಆರ್ಥಿಕ ಸಹಕಾರದ ಕುರಿತು ಚರ್ಚೆ ನಡೆದಿದೆ ಎಂದು ಅಧಿಕೃತ ಮಾಧ್ಯಮ ಶುಕ್ರವಾರ ವರದಿ ಮಾಡಿದೆ.

ಉಭಯ ನಾಯಕರು ಎರಡೂ ದೇಶಗಳ ದ್ವಿಪಕ್ಷೀಯ ಸಂಬಂಧಗಳನ್ನು ಉತ್ತೇಜಿಸಲು ಕೈಗೊಳ್ಳಬೇಕಾದ ಕ್ರಮಗಳ ಸಂಬಂಧ ಮಾತುಕತೆ ನಡೆಸಿದ್ದಾರೆ. ಈ ನಾಯಕರ ನಡುವಿನ ಮಾತುಕತೆ ಕುರಿತು ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ. ಆದರೆ ಎರಡೂ ದೇಶಗಳ ನಡುವೆ ಆರ್ಥಿಕ ಸಹಕಾರ ಮತ್ತು ಪ್ರದೇಶಿಕ ಭದ್ರತಾ ಸಹಕಾರದ ಕುರಿತು ಚರ್ಚೆ ನಡೆದಿದೆ ಎಂದು ಪಾಕಿಸ್ತಾನದ ರೇಡಿಯೊ ತಿಳಿಸಿದೆ.

ಪಾಕ್‌ನ ಯೂಸಫ್‌ ಅವರು, ಅಫ್ಗಾನಿಸ್ತಾನದಲ್ಲಿ ರಚನೆಯಾಗಿರುವ ತಾಲಿಬಾನ್‌ ನೇತೃತ್ವದ ಮಧ್ಯಂತರ ಸರ್ಕಾರದೊಂದಿಗೆ ಜಗತ್ತು ಸಂಪರ್ಕವನ್ನು ಉಳಿಸಿಕೊಳ್ಳಬೇಕು ಎಂದು ಈ ವೇಳೆ ಹೇಳಿದ್ದಾರೆ.

‘ಭದ್ರತೆ, ವ್ಯಾಪಾರ, ಹೂಡಿಕೆ, ಇಂಧನ ಮತ್ತು ಪ್ರಾದೇಶಿಕ ಸಂಪರ್ಕ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಎರಡೂ ದೇಶಗಳ ನಡುವೆ ಪರಸ್ಪರ ಸಮತೋಲಿತ ಸಹಕಾರ ಸಂಬಂಧವನ್ನು ಬಲಪಡಿಸಲು ನಾವು ಎದುರು ನೋಡುತ್ತಿದ್ದೇವೆ’ ಎಂದು ಅಮೆರಿಕ ವಿದೇಶಾಂಗ ಕಾರ್ಯಾಲಯ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು