ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜಾಪ್ರಭುತ್ವವನ್ನು ನಮ್ಮಿಂದ ದೂರ ಮಾಡಲು ಯಾರಿಗೂ ಸಾಧ್ಯವಾಗದು: ಜೊ ಬೈಡನ್‌

Last Updated 5 ನವೆಂಬರ್ 2020, 7:31 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ನಾವು ಜಯಗಳಿಸಲಿದ್ದೇವೆ ಎಂಬ ವಿಶ್ವಾಸ ನನಗಿದೆ ಎಂದು ಡೆಮಾಕ್ರಟಿಕ್‌ ಪಕ್ಷದ ಅಭ್ಯರ್ಥಿ ಜೊ ಬೈಡನ್‌ ಹೇಳಿದ್ದಾರೆ.

ಈ ವಿಚಾರವಾಗಿ ಗುರುವಾರ ವಿಡಿಯೊ ಟ್ವೀಟ್‌ ಮಾಡಿರುವ ಅವರು, 'ನಾವು ವಿಜಯಶಾಲಿಯಾಗಿ ಹೊರಹೊಮ್ಮಲಿದ್ದೇವೆ ಎಂಬ ವಿಶ್ವಾಸ ನನಗಿದೆ. ಇದು ಕೇವಲ ನನಗೆ ಸಿಕ್ಕ ಗೆಲುವಲ್ಲ. ಅಮೆರಿಕದ ಜನರಿಗೆ ದೊರೆತ ವಿಜಯ' ಎಂದು ಬಣ್ಣಿಸಿದ್ದಾರೆ.

'ನಮ್ಮ ಪ್ರಜಾಪ್ರಭುತ್ವವನ್ನು ನಮ್ಮಿಂದ ದೂರ ಮಾಡಲು ಯಾರಿಗೂ ಸಾಧ್ಯವಾಗದು. ಅದು ಇಗಷ್ಟೇ ಅಲ್ಲ. ಮುಂದೆ ಎಂದಿಗೂ ಸಾಧ್ಯವಾಗದು. ಪ್ರಜಾಪ್ರಭುತ್ವದ ಹಾದಿಯಲ್ಲಿ ಅಮೆರಿಕವು ತುಂಬಾ ದೂರ ಸಾಗಿ ಬಂದಿದೆ. ಅಮೆರಿಕವು ಹಲವಾರು ಸಂಘರ್ಷಗಳನ್ನು ಎದುರಿಸಿದೆ. ನಮ್ಮನ್ನು ಮೌನವಾಗಿಸಲು ಮತ್ತು ನಮ್ಮ ಧ್ವನಿಗಳನ್ನು ದಮನಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ' ಎಂದು ಬೈಡನ್‌ ಹೇಳಿದ್ದಾರೆ.

ಅಮೆರಿಕದ ಅಧ್ಯಕ್ಷೀಯ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಿರ್ಣಾಯಕ ಹಂತ ತಲುಪಿದ್ದು, ಡೆಮಾಕ್ರಟಿಕ್‌ ಪಕ್ಷದ ಅಭ್ಯರ್ಥಿ ಜೊ ಬೈಡನ್‌ ಅವರು 264 ಎಲೆಕ್ಟೋರಲ್‌ ಮತಗಳ ಮುನ್ನೆಡೆ ಸಾಧಿಸಿದ್ದಾರೆ. ಅವರ ಪ್ರತಿಸ್ಪರ್ಧಿಯಾಗಿರುವ ರಿಪಬ್ಲಿಕನ್‌ ಪಕ್ಷದ ಅಭ್ಯರ್ಥಿ ಡೊನಾಲ್ಡ್‌ ಟ್ರಂಪ್‌ 214 ಮತಗಳ ಮುನ್ನೆಡೆ ಹೊಂದಿದ್ದಾರೆ.

ಅಭ್ಯರ್ಥಿಗಳ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಲಿರುವ ಮಿಷಿಗನ್‌ ಮತ್ತು ವಿಸ್‌ಕಾನ್ಸಿಸ್‌ ರಾಜ್ಯಗಳಲ್ಲಿ ಬೈಡನ್‌ ಗೆಲುವು ಸಾಧಿಸಿದ್ದಾರೆ. ಈ ಎರಡೂ ರಾಜ್ಯಗಳಲ್ಲಿನ ಸೋಲು ಡೊನಾಲ್ಡ್‌ ಟ್ರಂಪ್‌ ಅವರಿಗೆ ಭಾರೀ ಹಿನ್ನೆಡೆ ಉಂಟು ಮಾಡಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಡೊನಾಲ್ಡ್‌ ಟ್ರಂಪ್‌, ಇದು 'ಸಾಮೂಹಿಕ ವಂಚನೆ' ಎಂದು ಆರೋಪಿಸಿದ್ದಾರೆ. ಈ ಕೂಡಲೇ ಮತ ಎಣಿಕೆ ಪ್ರಕ್ರಿಯೆಯನ್ನು ನಿಲ್ಲಿಸುವಂತೆಯೂ ಅವರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT