ಬುಧವಾರ, ನವೆಂಬರ್ 25, 2020
19 °C

ತಾನೇ ಮುಂದಿನ ಅಧ್ಯಕ್ಷ ಎಂದು ಬೈಡನ್‌ ಸುಳ್ಳು ಘೋಷಣೆ: ಟ್ರಂಪ್ ಆರೋಪ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್: ‘ಬೈಡನ್‌ ಅವರು ತಾನೇ ಮುಂದಿನ ಅಧ್ಯಕ್ಷ ಎಂದು ಸುಳ್ಳು ಘೋಷಣೆ ಮಾಡುತ್ತಿದ್ದಾರೆ’ ಎಂದು ಡೊನಾಲ್ಡ್‌ ಟ್ರಂಪ್‌  ಆರೋಪಿಸಿದ್ದಾರೆ.

‘ಡೆಮಾಕ್ರಟ್ ಪಕ್ಷದ ಅಭ್ಯರ್ಥಿ ಜೋ ಬೈಡನ್ ಅವರು ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದಿದ್ದಾರೆ’ ಎಂದು ಅಮೆರಿಕದ ಪ್ರಮುಖ ಸುದ್ದಿ ವಾಹಿನಿ ಗಳು ಶನಿವಾರ ವರದಿ ಮಾಡಿದ ಬಳಿಕ ಟ್ರಂಪ್ ಪ್ರತಿಕ್ರಿಯೆ ನೀಡಿದ್ದಾರೆ.

ಮಾಧ್ಯಮ ವರದಿಗಳು ಮತ್ತು ಬೈಡನ್‌ ಅವರ ಹೇಳಿಕೆಗೆ ಕೂಡಲೇ ಪ್ರತಿಕ್ರಿಯೆ ನೀಡಿರುವ ಅಧ್ಯಕ್ಷ ಟ್ರಂಪ್‌, ‘ಬೈಡನ್‌ ಅವರು ತಾನೇ ಮುಂದಿನ ಅಧ್ಯಕ್ಷ ಎಂದು ಸುಳ್ಳು ಘೋಷಣೆ ಮಾಡುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.

‘ಬೈಡನ್‌ ಅವರು ಹಾಗೇಕೆ ಹೇಳುತ್ತಿದ್ದಾರೆ ಮತ್ತು ಅವರ ಮಾಧ್ಯಮ ಮಿತ್ರರು ಅವರಿಗೇಕೆ ಬೆಂಬಲ ನೀಡು ತ್ತಿದ್ದಾರೆ ಎಂಬುದು ನಮಗೆಲ್ಲರಿಗೂ ಗೊತ್ತಿದೆ. ಸತ್ಯ ಬಹಿರಂಗವಾಗುವುದನ್ನು ಅವರು ಬಯಸುವುದಿಲ್ಲ. ಫಲಿತಾಂಶ ಘೋಷಣೆ ಇನ್ನೂ ತುಂಬಾ ದೂರವಿದೆ’ಎಂದಿದ್ದಾರೆ.
 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು