ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕ: ಬಡ ಕುಟುಂಬಗಳಿಗೆ ಇಂಟರ್ನೆಟ್‌ ವೆಚ್ಚ ಕಡಿತ

Last Updated 9 ಮೇ 2022, 11:35 IST
ಅಕ್ಷರ ಗಾತ್ರ

ವಾಷಿಂಗ್ಟನ್(ಎಎಫ್‌ಪಿ): ಕಡಿಮೆ ಆದಾಯದ ಕುಟುಂಬಗಳಿಗೆ ಇಂಟರ್ನೆಟ್‌ ದರವನ್ನು ಕಡಿತಗೊಳಿಸುವ ನಿಟ್ಟಿನಲ್ಲಿ ಅಮೆರಿಕ ಸರ್ಕಾರ 20 ದೂರಸಂಪರ್ಕ ಕಂಪನಿಗಳ ಜೊತೆ ಒಪ್ಪಂದ ಮಾಡಿಕೊಂಡಿದೆ.

ಈ ಪ್ರಕಾರ ಕಡಿಮೆ ಆದಾಯದ ಕುಟುಂಬಗಳಿಗೆ ದೂರಸಂಪರ್ಕ ಕಂಪನಿಗಳು ಇಂಟರ್ನೆಟ್ ಸೇವೆಯ ದರವನ್ನು ಮಾಸಿಕ 30 ಡಾಲರ್‌(₹2325)ಗಿಂತ ಹೆಚ್ಚು ವಿಧಿಸುವಂತಿಲ್ಲ. ಅಲ್ಲದೆ ಅವರಿಗೆ ವೇಗದ ಇಂಟರ್ನೆಟ್ ಸೇವೆಯನ್ನು ಕಲ್ಪಿಸಬೇಕು ಎಂದು ಶ್ವೇತ ಭವನ ಮಾಹಿತಿ ನೀಡಿದೆ.

ಈಗಾಗಲೇ ಸರ್ಕಾರದ ಬಡತನ ನಿರ್ಮೂಲನೆ ಕಾರ್ಯಕ್ರಮಕ್ಕೆ ಅರ್ಹವಿರುವ ಕುಟುಂಬಗಳು ಕಡಿಮೆ ದರದ ಇಂಟರ್ನೆಟ್ ಪಡೆಯಲಿವೆ. ಕಡಿಮೆ ದರಕ್ಕೆ ವೇಗದ ಇಂಟರ್ನೆಟ್ ಸೌಲಭ್ಯ ನೀಡುವುದು ಅಧ್ಯಕ್ಷ ಜೋ ಬೈಡನ್ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಸರ್ಕಾರ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT