ವಾಷಿಂಗ್ಟನ್: ‘ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ಭಾರತಕ್ಕೆ ಸಹಾಯ ಮಾಡಲು ಅಮೆರಿಕ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ’ ಎಂದು ವಿದೇಶಾಂಗ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಕೋವಿಡ್ ಎರಡನೇ ಅಲೆ ಎದುರಿಸುತ್ತಿರುವ ಭಾರತಕ್ಕೆ ಕಳೆದ ಒಂದು ವಾರದಲ್ಲಿ ಆರು ಯುದ್ಧ ವಿಮಾನಗಳ ಮೂಲಕ ಅಗತ್ಯ ವೈದ್ಯಕೀಯ ಪರಿಹಾರ ಸಾಮಗ್ರಿಗಳನ್ನು ರವಾನಿಸಲಾಗಿದೆ’ ಎಂದು ಅಮೆರಿಕ ವಿದೇಶಾಂಗ ವ್ಯವಹಾರಗಳ ಇಲಾಖೆಯಲ್ಲಿ ದಕ್ಷಿಣ ಮತ್ತು ಮಧ್ಯ ಏಷ್ಯಾ ವಿದ್ಯಮಾನಗಳ ಉಸ್ತುವಾರಿ ಎರ್ವಿನ್ ಮಾಸಿಂಗಾ ತಿಳಿಸಿದ್ದಾರೆ.

ಕೋವಿಡ್ ಲಸಿಕೆ ತಯಾರಿಸಲು ಬೇಕಾದ ಕಚ್ಚಾ ಸಾಮಗ್ರಿಗಳು ಸೇರಿದಂತೆ ಆಮ್ಲಜನಕ ಸಿಲಿಂಡರ್ಗಳು, ಎನ್95 ಮಾಸ್ಕ್ಗಳನ್ನು ಅಮೆರಿಕ ಈಗಾಗಲೇ ರವಾನಿಸಿದೆ. ಭಾರತಕ್ಕೆ ₹740 ಕೋಟಿ ಮೌಲ್ಯದ (100 ದಶಲಕ್ಷ ಡಾಲರ್) ಪರಿಹಾರ ಸಾಮಗ್ರಿಗಳನ್ನು ಕಳುಹಿಸಿಕೊಡುವ ನಿರೀಕ್ಷೆ ಇದೆ ಎಂದು ಎರ್ವಿನ್ ಮಾಸಿಂಗಾ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯೊಂದಿಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಮಾತುಕತೆ ನಡೆಸಿದ್ದ ವೇಳೆ ಅವರು ನೀಡಿದ್ದ ಭರವಸೆಗಳನ್ನು ಈಡೇರಿಸಲು ಸರ್ಕಾರ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಎಂದಿದ್ದಾರೆ.

ಇತ್ತೀಚೆಗೆ ಕೋವಿಡ್ ಸಾಂಕ್ರಾಮಿಕ ಎದುರಿಸುವ ಮಾರ್ಗಗಳು, ಇಂಡೊ–ಪೆಸಿಫಿಕ್ ಪ್ರದೇಶದಲ್ಲಿನ ಪರಿಸ್ಥಿತಿಯಲ್ಲಿ ಮತ್ತು ಬಹುಪಕ್ಷೀಯ ವೇದಿಕೆಗಳಲ್ಲಿ ಸಹಕಾರ ನೀಡುವ ಕುರಿತು ಭಾರತದ ವಿದೇಶಾಂಗ ಸಚಿವ ಜೈಶಂಕರ್ ಅವರು ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್ ಜತೆ ಚರ್ಚೆ ನಡೆಸಿದ್ದರು.

ಇದನ್ನೂ ಓದಿ... ಮೇ 10ರಿಂದ 14 ದಿನ ಲಾಕ್ಡೌನ್: ಬೆಳಿಗ್ಗೆ 10ರ ಬಳಿಕ ರಸ್ತೆಗಿಳಿದರೆ ಕಠಿಣ ಕ್ರಮ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.