ಶುಕ್ರವಾರ, ಜನವರಿ 15, 2021
20 °C

ಅಮೆರಿಕದಲ್ಲಿ ಬಂದೂಕುಧಾರಿಯಿಂದ ಚರ್ಚ್‌ನಲ್ಲಿ ಗುಂಡಿನ ದಾಳಿ

ಎಪಿ Updated:

ಅಕ್ಷರ ಗಾತ್ರ : | |

Prajavani

ನ್ಯೂಯಾರ್ಕ್‌: ಇಲ್ಲಿನ ಚರ್ಚ್‌ವೊಂದರಲ್ಲಿ ಗುಂಡಿನ ದಾಳಿ ನಡೆಸಿದ ಬಂದೂಕುಧಾರಿಯ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ.

‘ನ್ಯೂಯಾರ್ಕ್‌ನ ಸೇಂಟ್ ಜಾನ್ ದಿ ಡಿವೈನ್‌ ಕ್ಯಾಥೆಡ್ರಲ್ ಚರ್ಚ್‌ನಲ್ಲಿ ಭಾನುವಾರ ಸಂಜೆ 4 ಗಂಟೆಗೆ ಈ ಘಟನೆ ನಡೆದಿದೆ. ಚರ್ಚ್‌ನಲ್ಲಿ ಕ್ರಿಸ್‌ಮಸ್‌ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಂತ್ಯದಲ್ಲಿ ಬಂದೂಕುಧಾರಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ. ಈ ವೇಳೆ ಆತನನ್ನು ನಿಯಂತ್ರಿಸಲು ಪೊಲೀಸರು  ಗುಂಡು ಹಾರಿಸಿದ್ದಾರೆ. ಸದ್ಯ ಆತನ ಪರಿಸ್ಥಿತಿ ಗಂಭೀರವಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಪೊಲೀಸರು ಮಾಹಿತಿ ನೀಡಿದರು.  

45 ನಿಮಿಷದ ಸಂಗೀತ ಕಾರ್ಯಕ್ರಮ ಮುಕ್ತಾಯಗೊಂಡ ಬಳಿಕ ಜನರು ಚರ್ಚ್‌ನಿಂದ ಹೊರ ನಡೆಯುತ್ತಿದ್ದ ವೇಳೆ ಗುಂಡಿನ ಶಬ್ಧಗಳು ಕೇಳಿಬಂದಿವೆ. ಇದರಿಂದ ಭಯಭೀತಗೊಂಡ ಜನರು ಓಡಲು ಪ್ರಾರಂಭಿಸಿದರು. ಭದ್ರತೆಗಾಗಿ ನಿಯೋಜಿಸಲಾಗಿದ್ದ ಪೊಲೀಸರು ತಕ್ಷಣವೇ ಬಂದು, ರೈಫಲ್‌ ಹಿಡಿದಿದ್ದ ವ್ಯಕ್ತಿಯ ಮೇಲೆ ಗುಂಡು ಹಾರಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು