ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಯಾಪಿಟಲ್ ದಾಳಿ: ತನಿಖೆಗೆ ಹೊಸ ಸಮಿತಿ?

Last Updated 30 ಜೂನ್ 2021, 15:05 IST
ಅಕ್ಷರ ಗಾತ್ರ

ವಾಷಿಂಗ್ಟನ್: ಕ್ಯಾಪಿಟಲ್‌ ಹಿಲ್‌ನಲ್ಲಿ ಜನವರಿ 6ರಂದು ನಡೆದ ಹಿಂಸಾಚಾರದ ಕುರಿತು ಸ್ವತಂತ್ರ ಆಯೋಗದ ತನಿಖೆಗಾಗಿ ಹೊಸ ಆಯ್ಕೆ ಸಮಿತಿ ರಚಿಸಲು ಅಮೆರಿಕದ ಜನಪ್ರತಿನಿಧಿಗಳ ಸಭೆಯಲ್ಲಿ ಬುಧವಾರ ಮತ ಚಲಾಯಿಸಿಲಾಯಿತು.

ಅಂದು ಅಧ್ಯಕ್ಷರಾಗಿದ್ದ ಡೊನಾಲ್ಡ್‌ ಟ್ರಂಪ್‌ ಅವರ ಬೆಂಬಲಿಗರು ಸಂಸತ್‌ ಭವನಕ್ಕೆ (ಕ್ಯಾಪಿಟಲ್‌) ನುಗ್ಗಿ ದಾಂದಲೆ ನಡೆಸಿದ್ದರು. ಸ್ಪೀಕರ್‌ ಕಚೇರಿಗೆ ನುಗ್ಗಿ ಅಲ್ಲಿದ್ದ ವಸ್ತುಗಳನ್ನು ಚೆಲ್ಲಾಡಿದ್ದರು. ಕಿಟಕಿ ಗಾಜುಗಳನ್ನು ಒಡೆದು ಹಾಕಿದ್ದರು. ಕಲಾಕೃತಿಗಳನ್ನು ಹೊತ್ತೊಯ್ದಿದ್ದರು.

‘ಜನವರಿ 6ರ ಘಟನೆ ಏಕೆ ಸಂಭವಿಸಿತು, ಜನವರಿ 6ರಂದು ಆ ಘಟನೆ ಸಂಭವಿಸಲು ಯಾರು ಕಾರಣ? ಜನವರಿ 6ರ ದಂಗೆ ಮತ್ತೆ ಭವಿಷ್ಯದಲ್ಲಿ ಸಂಭವಿಸದಂತೆ ತಡೆಯಲು ನಾವು ಏನು ಮಾಡಬಹುದು’ ಎನ್ನುವುದನ್ನು ಕಂಡುಕೊಳ್ಳಲು ಡೆಮಾಕ್ರಟಿಕ್‌ ಪಕ್ಷದ ಸಂಸದರು ಇಡೀ ಘಟನೆಯ ತನಿಖೆ ಬಯಸಿದ್ದಾರೆ ಎಂದು ಸಂಸತ್‌ನಲ್ಲಿ ಡೆಮಾಕ್ರಟಿಕ್‌ ಪಕ್ಷದ ನಾಯಕರಾಗಿರುವ ಸ್ಟೆನಿ ಹೋಯರ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT