ಶನಿವಾರ, ಜನವರಿ 23, 2021
21 °C

ಡೊನಾಲ್ಡ್ ಟ್ರಂಪ್ ವಿರುದ್ಧ ವಾಗ್ದಂಡನೆ ನಾಳೆ ಮತಕ್ಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ವಿರುದ್ಧದ ವಾಗ್ದಂಡನೆ ನಿರ್ಣಯವನ್ನು ಅಮೆರಿಕ ಸಂಸತ್‌ನಲ್ಲಿ ಬುಧವಾರ ಮತಕ್ಕೆ ಹಾಕುವ ಪ್ರಕ್ರಿಯೆ ನಡೆಯಲಿದೆ.

ಕ್ಯಾಪಿಟಲ್‌ ಹಿಲ್‌ ಮೇಲೆ ಟ್ರಂಪ್‌ ಬೆಂಬಲಿಗರಿಂದ ನಡೆದ ದಾಳಿ ಹಿನ್ನೆಲೆಯಲ್ಲಿ ಈ ವಾಗ್ದಂಡನೆ ವಿಧಿಸಲಾಗುತ್ತಿದೆ.

ಸಂಸದರಾದ ಜೆಮಿ ರಸ್ಕಿನ್‌, ಡೇವಿಡ್‌ ಸಿಸಿಲಿನ್‌ ಹಾಗೂ ಟೆಡ್‌ ಲಿಯು ಅವರು ಸಿದ್ಧಪಡಿಸಿರುವ ವಾಗ್ದಂಡನೆ ನಿರ್ಣಯವನ್ನು ಸೋಮವಾರ ಸಂಸತ್‌ನಲ್ಲಿ ಮಂಡಿಸಲಾಗಿತ್ತು.

ಇನ್ನೊಂದೆಡೆ, ಪಕ್ಷದ ಸಂಸದರೊಂದಿಗೆ ಸೋಮವಾರ ಆನ್‌ಲೈನ್‌ ಮೂಲಕ ಸಭೆ ನಡೆಸಿದ, ಸಂಸತ್‌ನಲ್ಲಿ ಡೆಮಾಕ್ರಟಿಕ್‌ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಸ್ಟೆನಿ ಹೋಯರ್‌, ‘ಟ್ರಂಪ್‌ ವಿರುದ್ಧದ ವಾಗ್ದಂಡನೆ ನಿರ್ಣಯವನ್ನು ಬುಧವಾರ ಮಂಡಿಸಿ, ಮತಕ್ಕೆ ಹಾಕಲಾಗುತ್ತದೆ’ ಎಂದು ತಿಳಿಸಿದರು.

ಜ.6ರಂದು ಕ್ಯಾಪಿಟಲ್‌ ಮೇಲೆ ದಾಳಿ ಟ್ರಂಪ್‌ ಬೆಂಬಲಿಗರು ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ನಡೆದ ಗಲಭೆಯಲ್ಲಿ ಪೊಲೀಸ್‌ ಅಧಿಕಾರಿ ಸೇರಿ ಐವರು ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ, ಟ್ರಂಪ್‌ ವಿರುದ್ಧ ದಂಗೆಗೆ ಪ್ರಚೋದಿಸಿದ ಆರೋಪ ಹೊರಿಸಲಾಗಿದ್ದು, ಅವರ ವಿರುದ್ಧ ವಾಗ್ದಂಡನೆ ನಿರ್ಣಯ ಮಂಡನೆಗೆ ಡೆಮಾಕ್ರಟಿಕ್ ಪಕ್ಷದ ಸಂಸದರು ಮುಂದಾಗಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು