ಗುರುವಾರ , ಅಕ್ಟೋಬರ್ 1, 2020
26 °C

ಅಮೆರಿಕ ಅಧ್ಯಕ್ಷೀಯ ಚುನಾವಣೆ: ವಿದೇಶಿ ಶಕ್ತಿಗಳ ಹಸ್ತಕ್ಷೇಪದ ಎಚ್ಚರಿಕೆ

ಎಪಿ Updated:

ಅಕ್ಷರ ಗಾತ್ರ : | |

Prajavani

ವಾಷಿಂಗ್ಟನ್‌: ನವೆಂಬರ್‌ನಲ್ಲಿ ನಡೆಯಲಿರುವ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ವಿದೇಶಿ ಶಕ್ತಿಗಳು ಹಸ್ತಕ್ಷೇಪ ಮಾಡುತ್ತಿವೆ ಎಂದು ಅಮೆರಿಕದ ಗುಪ್ತಚರ ಇಲಾಖೆಯ ಮುಖ್ಯಸ್ಥ ವಿಲಿಯಂ ಇವಾನಿನಾ ಎಚ್ಚರಿಕೆ ನೀಡಿದ್ದಾರೆ. 

ಡೆಮಾಕ್ರಟಿಕ್‌ ಪಕ್ಷದ ಅಭ್ಯರ್ಥಿ ಜೋ ಬಿಡೆನ್‌ ಅವರ ಹೆಸರಿಗೆ ಧಕ್ಕೆ ತರಲು ರಷ್ಯಾ ಪ್ರಯತ್ನಿಸುತ್ತಿದೆ. ಅಲ್ಲದೇ ಮತದಾರರನ್ನು ಡೊನಾಲ್ಡ್‌ ಟ್ರಂಪ್ ಪರ ಸೆಳೆಯುವ ಕಾರ್ಯದಲ್ಲಿ ನಿರತವಾಗಿದೆ ಎಂದು  ಅವರು ತಿಳಿಸಿದ್ದಾರೆ.

ಇನ್ನೊಂದೆಡೆ, ರಿಪಬ್ಲಿಕನ್‌ ಅಭ್ಯರ್ಥಿ ಡೊನಾಲ್ಡ್‌ ಟ್ರಂಪ್‌ ಅವರ ಮರು ಆಯ್ಕೆಗೆ ಚೀನಾ ಭಾರೀ ವಿರೋಧ ವ್ಯಕ್ತಪಡಿಸುತ್ತಿದೆ. ಡೊನಾಲ್ಡ್‌ ಟ್ರಂಪ್‌ ನೇತೃತ್ವದ ಸರ್ಕಾರದ ನೀತಿಗಳು ತನ್ನ ಹಿತಾಸಕ್ತಿಗೆ ವಿರುದ್ಧವಾಗಿವೆ ಎನ್ನುವುದು ಚೀನಾ ನಿಲುವಾಗಿದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ನವೆಂಬರ್‌ನಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಟ್ರಂಪ್‌ ಮರು ಆಯ್ಕೆಯಾಗಲು ರಷ್ಯಾ ನೆರವಾಗುತ್ತಿದೆ ಎಂದು ಗುಪ್ತಚರ ಇಲಾಖೆ ತಿಳಿಸಿದೆ. ಈ ಹಿಂದೆಯೂ 2016ರ ಅಧ್ಯಕ್ಷೀಯ ಚುನಾವಣೆಯಲ್ಲಿ ರಷ್ಯಾ, ಟ್ರಂಪ್‌ ಬೆಂಬಲಕ್ಕೆ ನಿಂತಿತ್ತು ಎಂಬ ಸುದ್ದಿ ಕೇಳಿ ಬಂದಿತ್ತು. ಆದರೆ ಈ ವಿಷಯವನ್ನು ಟ್ರಂಪ್‌ ಅಲ್ಲಗೆಳೆದಿದ್ದರು.

ಈ ಬಗ್ಗೆ ನ್ಯೂಜೆರ್ಸಿಯಲ್ಲಿ ಪ್ರತಿಕ್ರಿಯಿಸಿರುವ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ‘ರಷ್ಯಾ, ಜೋ ಬಿಡನ್ ಅವರ ವಿರುದ್ಧವಾಗಿದೆ ಎಂಬ ವಿಷಯವನ್ನು ನಾನು ಸ್ವೀಕರಿಸಲ್ಲ. ಏಕೆಂಕರೆ ರಷ್ಯಾದ ವಿರುದ್ಧ ಅತಿ ಹೆಚ್ಚು ಕಠಿಣ ನಿರ್ಧಾರಗಳನ್ನು ನಾನು ಕೈಗೊಂಡಿದ್ದೇನೆ’ ಎಂದಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು