ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೌಶಲ ಹೊಂದಿದ ಉದ್ಯೋಗಿಗಳ ವೀಸಾ ನಿಯಮ ಬದಲಿಗೆ ಅಮೆರಿಕ ಕೋರ್ಟ್‌ ತಡೆ

Last Updated 2 ಡಿಸೆಂಬರ್ 2020, 7:19 IST
ಅಕ್ಷರ ಗಾತ್ರ

ಸ್ಯಾನ್‌ ಫ್ರಾನ್ಸಿಸ್ಕೊ: ಕೌಶಲ ಹೊಂದಿದ ಉದ್ಯೋಗಾಂಕ್ಷಿಗಳಿಗೆ ನೀಡುವ ವೀಸಾಕ್ಕೆ ಸಂಬಂಧಿಸಿದ ನಿಯಮಗಳನ್ನು ಬದಲಾಯಿಸಿದ್ದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಕ್ರಮಕ್ಕೆ ಸ್ಯಾನ್‌ ಫ್ರಾನ್ಸಿಸ್ಕೊದ ಜಿಲ್ಲಾ ನ್ಯಾಯಾಲಯ ತಡೆ ನೀಡಿದೆ.

ವೀಸಾ ನಿಯಮಗಳಲ್ಲಿ ಬದಲಾವಣೆ ತಂದ ಆಂತರಿಕ ಭದ್ರತಾ ಇಲಾಖೆಯ ಕ್ರಮವನ್ನು ಪ್ರಶ್ನಿಸಿ ಯುಎಸ್‌ ಚೇಂಬರ್‌ ಆಫ್‌ ಕಾಮರ್ಸ್‌ ಸೇರಿದಂತೆ ವಿವಿಧ ಸಂಘ–ಸಂಸ್ಥೆಗಳು ನ್ಯಾಯಾಲಯದ ಮೊರೆ ಹೋಗಿದ್ದವು. ಯಾವುದೇ ಸಮರ್ಪಕ ಪರಾಮರ್ಶೆ ನಡೆಸದೇ ವೀಸಾ ನೀಡುವ ಪ್ರಕ್ರಿಯೆಯಲ್ಲಿ ಹೊಸ ನಿರ್ಬಂಧಗಳನ್ನು ಹೇರಲಾಗಿದೆ ಎಂದು ಅರ್ಜಿದಾರರು ವಾದಿಸಿದ್ದರು.

ಸಿಲಿಕಾನ್‌ ವ್ಯಾಲಿಯಲ್ಲಿರುವ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಕಂಪನಿಗಳು ವಿವಿಧ ದೇಶಗಳ ಪ್ರತಿಭಾವಂತ ಎಂಜಿನಿಯರ್‌ಗಳು ಹಾಗೂ ಇತರ ಕೌಶಲ ಹೊಂದಿದ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳುತ್ತವೆ. ಇಂಥ ಕೌಶಲಾಧರಿತ ಉದ್ಯೋಗಿಗಳಿಗೆ ಎಚ್‌1–ಬಿ ವೀಸಾ ನೀಡಲಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT