ಶುಕ್ರವಾರ, 9 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರೀನ್‌ಕಾರ್ಡ್‌ ಅರ್ಜಿದಾರರ ಕಾಯಂ ವಾಸಕ್ಕೆ ಕ್ರಮ: ಅಮೆರಿಕ ಸಂಸದರ ಒತ್ತಾಯ

Last Updated 1 ಸೆಪ್ಟೆಂಬರ್ 2021, 6:01 IST
ಅಕ್ಷರ ಗಾತ್ರ

ವಾಷಿಂಗ್ಟನ್: ಅಮೆರಿಕದಲ್ಲಿ ಉದ್ಯೋಗ ಆಧರಿತ ಗ್ರೀನ್‌ ಕಾರ್ಡ್‌ಗಾಗಿ ಕಾಯುತ್ತಿರುವವರ ಕಾಯಂ ವಾಸಕ್ಕೆ ಅನುಕೂಲ ಕಲ್ಪಿಸುವಂಥ ಕ್ರಮ ಕೈಗೊಳ್ಳಲು 40 ಸಂಸದರು ಒತ್ತಾಯಿಸಿದ್ದಾರೆ.

ಭಾರತೀಯ ಅಮೆರಿಕನ್ ಸಂಸದ ರಾಜಾ ಕೃಷ್ಣಮೂರ್ತಿ ನೇತೃತ್ವದಲ್ಲಿ ಈ ಸಂಸದರು ಸ್ಪೀಕರ್‌ ನ್ಯಾನ್ಸಿ ಪೆಲೋಸಿ ಹಾಗೂ ಸೆನೆಟ್‌ನ ನಾಯಕ ಚುಕ್‌ ಶೂಮರ್‌ ಅವರಿಗೆ ಪತ್ರ ಬರೆದಿದ್ದಾರೆ.

12 ಲಕ್ಷಕ್ಕೂ ಅಧಿಕ ವಿದೇಶಿಯರು ಅರ್ಜಿ ಸಲ್ಲಿಸಿ, ಗ್ರೀನ್‌ ಕಾರ್ಡ್‌ಗಾಗಿ ಕಾಯುತ್ತಿದ್ದಾರೆ. ಈ ಪೈಕಿ ಭಾರತೀಯರೇ ಅಧಿಕ ಸಂಖ್ಯೆಯಲ್ಲಿ ಇದ್ದಾರೆ.

‘ಗ್ರೀನ್‌ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸಿರುವವರ ಪೈಕಿ ಹೆಚ್ಚಿನವರು ಎಚ್–1ಬಿ ವೀಸಾ ಹೊಂದಿದವರಾಗಿದ್ದಾರೆ. ಸಂಕಷ್ಟದಲ್ಲಿರುವ ಅವರಿಗೆ ನೆರವು ನೀಡದಿದ್ದರೆ, ಆರ್ಥಿಕ ಪುನಶ್ಚೇತನ ಪ್ರಕ್ರಿಯೆ ಮೇಲೆ ಪರಿಣಾಮ ಬೀರುವುದು’ ಎಂದು ಈ ಸಂಸದರು ಪತ್ರದಲ್ಲಿ ಪ್ರತಿಪಾದಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT