ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವಸಂಸ್ಥೆ ಅಧಿವೇಶನ: ಕೋವಿಡ್, ಹವಾಮಾನ ಬದಲಾವಣೆ ಬಗ್ಗೆ ಚರ್ಚೆಗೆ ಬೈಡನ್ ಆದ್ಯತೆ

Last Updated 18 ಸೆಪ್ಟೆಂಬರ್ 2021, 5:51 IST
ಅಕ್ಷರ ಗಾತ್ರ

ವಿಶ್ವಸಂಸ್ಥೆ: ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ವಿಶ್ವಸಂಸ್ಥೆಯ ವಾರ್ಷಿಕ ಮಹಾ ಅಧಿವೇಶನದಲ್ಲಿ ಪಾಲ್ಗೊಳ್ಳುತ್ತಿರುವ ಜೋ ಬೈಡನ್ ಅವರು, ತಮ್ಮ ಚೊಚ್ಚಲ ಭಾಷಣದಲ್ಲಿ ಕೋವಿಡ್‌ ಬಿಕ್ಕಟ್ಟು ನಿವಾರಣೆ, ಹವಾಮಾನ ಬದಲಾವಣೆ ವಿರುದ್ಧದ ಹೋರಾಟ, ಮಾನವ ಹಕ್ಕುಗಳು ಮತ್ತು ಪ್ರಜಾಪ್ರಭುತ್ವದ ‌ರಕ್ಷಣೆ ಹಾಗೂ ಇತರ ಅಂತರರಾಷ್ಟ್ರೀಯ ವಿಚಾರಗಳ ಕುರಿತು ಮಾತನಾಡಲಿದ್ದಾರೆ ಎಂದು ವಿಶ್ವಸಂಸ್ಥೆಯಲ್ಲಿನ ಅಮೆರಿಕದ ರಾಯಭಾರಿ ತಿಳಿಸಿದ್ದಾರೆ.

ಮುಂದಿನ ವಾರ ನ್ಯೂಯಾರ್ಕ್‌ನಲ್ಲಿ ನಡೆಯಲಿರುವ ವಿಶ್ವಸಂಸ್ಥೆಯ 76ನೇ ಮಹಾ ಅಧಿವೇಶನದಲ್ಲಿ ಅಮೆರಿಕದ ಕಾರ್ಯಸೂಚಿ ಕುರಿತು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವಸಂಸ್ಥೆಯಲ್ಲಿನ ಅಮೆರಿಕ ರಾಯಭಾರಿ ಲಿಂಡಾ ಥಾಮಸ್‌–ಗ್ರೀನ್‌ಫೀಲ್ಡ್‌, ‘ಈ ಅಧಿವೇಶನದಲ್ಲಿ ಹವಾಮಾನ ಬದಲಾವಣೆ ವಿಭಾಗದ ಅಧಿಕಾರಿ ಜಾನ್ ಕೆರ‍್ರಿ ಮತ್ತು ಇತರೆ ಹಿರಿಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ‘ ಎಂದು ಹೇಳಿದರು.

‘ಕೋವಿಡ್‌ ನಿರ್ಮೂಲನೆ, ಹವಾಮಾನ ಬದಲಾವಣೆ ವಿರುದ್ಧದ ಹೋರಾಟ ಮತ್ತು ಮಾನವ ಹಕ್ಕುಗಳು, ಪ್ರಜಾಪ್ರಭುತ್ವದ ರಕ್ಷಣೆ ಜೊತೆಗೆ ಅಂತರರಾಷ್ಟ್ರೀಯ ನಿಯಮಾಧಾರಿತ ಆದೇಶಗಳ ಕುರಿತು ಆದ್ಯತೆಯೊಂದಿಗೆ ಬೈಡನ್ ಅಧಿವೇಶನದಲ್ಲಿ ಮಾತನಾಡಲಿದ್ದಾರೆ‘ ಎಂದು ಅವರು ತಿಳಿಸಿದರು.

ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್‌ ಇದೇ 20ರಂದು ನ್ಯೂಯಾರ್ಕ್‌ನಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರನ್ನು ಭೇಟಿಯಾಗಲಿದ್ದಾರೆ. ಬೈಡನ್ ಅವರು ಇದೇ 21ರಂದು ಸಾಮಾನ್ಯ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT