ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮ್ಯಾನ್ಮಾರ್‌ ಮಿಲಿಟರಿಯಿಂದ ಅಮಾಯಕ ನಾಗರಿಕರ ಹತ್ಯೆ: ಜೋ ಬೈಡನ್ ಖಂಡನೆ

Last Updated 29 ಮಾರ್ಚ್ 2021, 6:24 IST
ಅಕ್ಷರ ಗಾತ್ರ

ವಾಷಿಂಗ್ಟನ್: ಮ್ಯಾನ್ಮಾರ್‌ನಲ್ಲಿ ಮಿಲಿಟರಿ ಆಡಳಿತವು ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರಕಾರವನ್ನು ಉರುಳಿಸಿ ಇತ್ತೀಚಿಗೆ ಅಮಾಯಕ ನಾಗರಿಕರನ್ನು ಹತ್ಯೆಗೈದಿರುವ ಘಟನೆಯನ್ನು ಅಮೆರಿಕ ಅಧ್ಯಕ್ಷ ಜೋ ಬೈಡನ್ ತೀವ್ರವಾಗಿ ಖಂಡಿಸಿದ್ದಾರೆ.

'ಇದು ಭಯಾನಕ. ನಿಜಕ್ಕೂ ಅತಿರೇಕದ ಘಟನೆ. ನನಗೆ ಲಭಿಸಿದ ವರದಿಗಳ ಪ್ರಕಾರ ಅನಗತ್ಯವಾಗಿ ನಾಗರಿಕರನ್ನು ಕೊಲೆ ಮಾಡಲಾಗಿದೆ' ಎಂದು ಬೈಡನ್ ಪ್ರತಿಕ್ರಿಯಿಸಿದ್ದಾರೆ.

ಮ್ಮಾನ್ಮಾರ್‌ನಲ್ಲಿ ಮಿಲಿಟರಿ ಆಡಳಿತವನ್ನು ವಿರೋಧಿಸಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿರುವನಾಗರಿಕರ ಮೇಲೆ ಭದ್ರತಾ ಪಡೆಯು ಗುಂಡಿನ ದಾಳಿ ನಡೆಸಿದೆ. ಪರಿಣಾಮ ಶನಿವಾರ ಒಂದೇ ದಿನದಲ್ಲಿ 114 ಮಂದಿ ಹತ್ಯೆಗೀಡಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಫೆಬ್ರುವರಿ 1ರ ಸೇನಾದಂಗೆಯ ಬಳಿಕ ಇದುವರೆಗೆ ನಡೆದ ಹಿಂಸಾಚಾರದಲ್ಲಿ 440ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

ಯಾಂಗೂನ್‌ನಲ್ಲಿರುವ ಅಮೆರಿಕದ ಕೇಂದ್ರದ ಮೇಲೂ ಮ್ಯಾನ್ಮಾರ್ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿತ್ತು ಎಂಬುದು ವರದಿಯಾಗಿದೆ. ಈ ಕುರಿತು ತನಿಖೆ ನಡೆಸಲಾಗುವುದು ಎಂದು ಸದನದ ವಿದೇಶಾಂಗ ವ್ಯವಹಾರಗಳ ಸಮಿತಿಯ ಅಧ್ಯಕ್ಷರಾಗಿರುವ ಗ್ರೆಗರಿ ಮೀಕ್ಸ್ ಹೇಳಿದ್ದಾರೆ.

ಮ್ಯಾನ್ಮಾರ್‌ನಲ್ಲಿ ಸಶಸ್ತ್ರ ಪಡೆ ದಿನದಂದೇ ನಾಗರಿಕರನ್ನು ಹತ್ಯೆಗೈಯಲಾಗಿದೆ. ಯಾಂಗೂನ್‌ನಲ್ಲಿ ಅಮೆರಿಕದ ಕೇಂದ್ರದ ಮೇಲಿನ ವರದಿಯಾಗಿರುವ ದಾಳಿಯನ್ನು ಯಾವುದೇ ಕಾರಣಕ್ಕೂ ಸಮರ್ಥಿಸಲಾಗದು. ಪರಿಸ್ಥಿತಿ ಕೈಮೀರಿದೆ ಎಂದವರು ಹೇಳಿದ್ದಾರೆ.


ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT