ಶುಕ್ರವಾರ, ಡಿಸೆಂಬರ್ 4, 2020
20 °C

ಚುನಾವಣೆಯಲ್ಲಿ ಜಯಿಸಿದ್ದೇನೆ: ಟ್ರಂಪ್ ಟ್ವೀಟ್‌ಗೆ ಟ್ವಿಟರ್‌ ಉತ್ತರವೇನು?

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಜೋ ಬೈಡನ್ ವಿರುದ್ಧ ಸೋಲನುಭವಿಸಿದ್ದನ್ನು ಒಪ್ಪಿಕೊಳ್ಳಲು ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ನಿರಾಕರಿಸಿದ್ದಾರೆ. ನವೆಂಬರ್ 3ರ ಅಧ್ಯಕ್ಷೀಯ ಚುನಾವಣೆಯಲ್ಲಿ ನಾನೇ ಜಯಗಳಿಸಿದ್ದೇನೆ ಎಂದು ಟ್ರಂಪ್ ಮತ್ತೊಮ್ಮೆ ಹೇಳಿದ್ದಾರೆ.

‘ನಾನು ಚುನಾವಣೆ ಗೆದ್ದಿದ್ದೇನೆ!’ ಎಂದು ಸೋಮವಾರ ಟ್ರಂಪ್ ಟ್ವೀಟ್ ಮಾಡಿದ್ದಾರೆ. ಆದರೆ, ಈ ಟ್ವೀಟ್‌ ಕೆಳಗೆ ‘ಅಧಿಕೃತ ಮೂಲಗಳು ಚುನಾವಣೆ ಬಗ್ಗೆ ಬೇರೆಯೇ ಮಾಹಿತಿ ನೀಡಿವೆ’ ಎಂದು ಟ್ವಿಟರ್‌ ಉಲ್ಲೇಖಿಸಿದೆ.

ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಈ ಹಿಂದಿನ ಕೆಲವು ಟ್ವೀಟ್‌ಗಳಲ್ಲಿಯೂ ಟ್ರಂಪ್ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: 

ಬಹುಮತಕ್ಕೆ ಅಗತ್ಯವಿರುವ 270ಕ್ಕಿಂತಲೂ ಹೆಚ್ಚು ಎಲೆಕ್ಟೋರಲ್ ಮತಗಳನ್ನು ಬೈಡನ್ ಗಳಿಸಿದ ಬಳಿಕವೂ ಅಧ್ಯಕ್ಷೀಯ ಚುನಾವಣೆಯಲ್ಲಿನ ಸೋಲೊಪ್ಪಿಕೊಳ್ಳಲು ಟ್ರಂಪ್ ನಿರಾಕರಿಸಿದ್ದಾರೆ. ಟ್ರಂಪ್‌ಗೆ 232 ಎಲೆಕ್ಟೋರಲ್ ಮತಗಳು ದೊರೆತಿವೆ. ಫಲಿತಾಂಶವನ್ನು ಒಪ್ಪಿಕೊಳ್ಳದ ಟ್ರಂಪ್ ಪೆನ್ಸಿಲ್ವೇನಿಯಾ, ನೆವಾಡ, ಮಿಷಿಗನ್, ಜಾರ್ಜಿಯಾ ಮತ್ತು ಅರಿಜೋನಾಗಳಲ್ಲಿ ಫಲಿತಾಂಶವನ್ನು ಪ್ರಶ್ನಿಸಿದ್ದಾರೆ. ವಿಸ್ಕಾನ್ಸಿನ್‌ನಲ್ಲಿ ಮರುಮತ ಎಣಿಕೆಗೆ ಆಗ್ರಹಿಸಿದ್ದಾರೆ.

ಪ್ರಮುಖ ರಾಜ್ಯಗಳಲ್ಲಿ ಚುನಾವಣಾ ಅಕ್ರಮ ನಡೆದಿದೆ ಎಂದು ಟ್ರಂಪ್ ಮೊಕದ್ದಮೆಗಳನ್ನೂ ಹೂಡಿದ್ದಾರೆ. ಆದರೆ ಅದಕ್ಕೆ ತಕ್ಕ ಸಾಕ್ಷ್ಯಗಳನ್ನು ಒದಗಿಸಿಲ್ಲ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು