ಮಂಗಳವಾರ, ಜೂನ್ 22, 2021
22 °C
ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ

ಭಾರತಕ್ಕೆ ತೆರಳದಂತೆ ತನ್ನ ನಾಗರಿಕರಿಗೆ ಅಮೆರಿಕ ಸಲಹೆ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ವಾಷಿಂಗ್ಟನ್‌: ಭಾರತದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಆ ದೇಶಕ್ಕೆ ಪ್ರಯಾಣಿಸದಂತೆ ತನ್ನ ನಾಗರಿಕರಿಗೆ ತಿಳಿಸಿರುವ ಅಮೆರಿಕ, ಈ ಸಂಬಂಧ ಪರಿಷ್ಕೃತ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

‘ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ಭಾರತಕ್ಕೆ ಪ್ರಯಾಣಿಸಬೇಡಿ. ಅಪರಾಧ ಮತ್ತು ಭಯೋತ್ಪಾದನೆ ಹೆಚ್ಚಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಾಗಿ ಈ ಕ್ರಮ ಕೈಗೊಳ್ಳಲಾಗಿದೆ‘ ಎಂದು ವಿದೇಶಾಂಗ ಸಚಿವಾಲಯ ಬುಧವಾರ ಹೇಳಿದೆ. ಈ ಆದೇಶ, ಕಳೆದ ಏಪ್ರಿಲ್ 28ರಂದು ಬಿಡುಗಡೆ ಮಾಡಿದ ಮಾರ್ಗಸೂಚಿಯನ್ನೇ ಹೋಲುತ್ತದೆ.

ಏಪ್ರಿಲ್ 28ರಂದು ಹೊರಡಿಸಿದ ಆದೇಶದಲ್ಲಿ, ಸ್ವಯಂ ಪ್ರೇರಿತವಾಗಿ ಅಮೆರಿಕದ ಸರ್ಕಾರಿ ನೌಕರರ ಕುಟುಂಬದ ಸದಸ್ಯರಿಗೆ, ಭಾರತಕ್ಕೆ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿತ್ತು. ಈ ಎರಡೂ ಪ್ರಯಾಣ ಮಾರ್ಗಸೂಚಿಗಳನ್ನು ಎಚ್ಚರಿಕೆ ನೀಡುವ ‘ಹಂತ 4‘ ಎಂದು ಗುರುತಿಸಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು