ಗುರುವಾರ , ಫೆಬ್ರವರಿ 25, 2021
19 °C

ಭಾರತ–ಚೀನಾ ಸೇನೆ ಹಿಂತೆಗೆತ ಪ್ರಕ್ರಿಯೆ ಮೇಲೆ ಅಮೆರಿಕ ನಿಗಾ

ಪಿಟಿಐ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್‌: ‘ಭಾರತ–ಚೀನಾ ಸೇನೆ ಹಿಂಪಡೆಯುವಿಕೆ ಪ್ರಕ್ರಿಯೆಯ ವರದಿಗಳನ್ನು ನಿಕಟವಾಗಿ ಗಮನಿಸಲಾಗುತ್ತಿದೆ’ ಎಂದು ಅಮೆರಿಕ ತಿಳಿಸಿದೆ.

‘ಚೀನಾ ಮತ್ತು ಭಾರತ, ಪರಿಸ್ಥಿತಿಯನ್ನು ತಿಳಿಗೊಳಿಸಲು ಕೈಗೊಂಡಿರುವ ಪ್ರಯತ್ನಗಳು ಸ್ವಾಗತಾರ್ಹ. ಸೇನಾ ಪಡೆಗಳನ್ನು ವಾಪಸ್‌ ಕರೆಯಿಸಿಕೊಳ್ಳುತ್ತಿರುವ ವರದಿಗಳನ್ನು ಗಮನಿಸಲಾಗುತ್ತಿದೆ. ಎರಡೂ ರಾಷ್ಟ್ರಗಳ ಮಧ್ಯ ಉದ್ಭವಿಸಿರುವ ಪರಿಸ್ಥಿತಿಯ ಮೇಲೆಯೂ ನಿಗಾವಹಿಸಲಾಗಿದೆ’ ಎಂದು ಅಮೆರಿಕದ ವಿದೇಶಾಂಗ ಇಲಾಖೆಯ ವಕ್ತಾರ ನೆಡ್‌ ಪ್ರೈಸ್ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪೂರ್ವ ಲಡಾಖ್‌ನಲ್ಲಿ 8 ತಿಂಗಳ ಕಾಲ ಚೀನಾ ಮತ್ತು ಭಾರತ ಸೇನಾಪಡೆಗಳನ್ನು ಜಮಾವಣೆ ಮಾಡಿದ್ದವು. ಇತ್ತೀಚಿಗೆ ಒಮ್ಮತಕ್ಕೆ ಬಂದ ಉಭಯ ರಾಷ್ಟ್ರಗಳು  ಪ್ಯಾಂಗಾಂಗ್‌ ಸರೋವರದಿಂದ ಸೇನಾ ಪಡೆಗಳನ್ನು ವಾಪಸ್‌ ಕರೆಸಿಕೊಳ್ಳಲು ನಿರ್ಧರಿಸಿದ್ದವು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು