ವಾಷಿಂಗ್ಟನ್: ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕೆನ್ ಅವರು ಮಾರ್ಚ್ 1ರಂದು ಭಾರತಕ್ಕೆ ಆಗಮಿಸಲಿದ್ದಾರೆ.
ನವದೆಹಲಿಯಲ್ಲಿ ಮಾ. 1ರಂದು ನಡೆಯಲಿರುವ ಜಿ 20 ಸದಸ್ಯ ರಾಷ್ಟ್ರಗಳ ವಿದೇಶಾಂಗ ಸಚಿವರ ಸಭೆಯಲ್ಲಿ ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್, ರಷ್ಯಾದ ವಿದೇಶಾಂಗ ಸಚಿವ ಸರ್ಗಿ ಲಾವ್ರೊವ್ ಅವರೊಂದಿಗೆ ಆ್ಯಂಟನಿ ಬ್ಲಿಂಕನ್ ಭಾಗವಹಿಸಲಿದ್ದಾರೆ.
‘ಬಹುಪಕ್ಷೀಯತೆಯ ಬಲಪಡಿಸುವಿಕೆ ಸೇರಿದಂತೆ ಆಹಾರ, ಇಂಧನ ಭದ್ರತೆ, ಸುಸ್ಥಿರ ಅಭಿವೃದ್ಧಿಯಲ್ಲಿ ಸಹಕಾರದ ಕುರಿತು ಬ್ಲಿಂಕೆನ್ ಚರ್ಚೆ ನಡೆಸಲಿದ್ದಾರೆ ಎಂದು ಅಮೆರಿಕ ವಿದೇಶಾಂಗ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ನಮ್ಮ ಬಲವಾದ ಪಾಲುದಾರಿಕೆಯನ್ನು ಪುನರುಚ್ಚರಿಸಲು ಭಾರತದ ಸರ್ಕಾರಿ ಅಧಿಕಾರಿಗಳು ಮತ್ತು ನಾಗರಿಕರನ್ನು ಬ್ಲಿಂಕೆನ್ ಭೇಟಿ ಮಾಡಲಿದ್ದಾರೆ ಎಂದು ಹೇಳಿದೆ.
ಭಾರತದ ಆತಿಥ್ಯದಲ್ಲಿ ಜಿ 20 ಶೃಂಗಸಭೆಯು ಸೆಪ್ಟೆಂಬರ್ 9 ಮತ್ತು 10ರಂದು ನಡೆಯಲಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವ ವಹಿಸಲಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.