ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವದ ಹಲವೆಡೆ ಮಂಕಿಪಾಕ್ಸ್ ಆತಂಕ: ಅಮೆರಿಕದಲ್ಲಿ 1, ಪೋರ್ಚುಗಲ್‌ನಲ್ಲಿ 5 ಪ್ರಕರಣ

ಅಕ್ಷರ ಗಾತ್ರ

ವಾಷಿಂಗ್ಟನ್: ಅಪರೂಪದ ಮಂಕಿ ಪಾಕ್ಸ್ ವೈರಸ್‌ನ ಈ ವರ್ಷದ ಮೊದಲ ಪ್ರಕರಣ ಅಮೆರಿಕದ ಮಸಾಚುಸೆಟ್ಸ್‌ನಲ್ಲಿ ಪತ್ತೆಯಾಗಿತ್ತು. ಇದರ ಬೆನ್ನಲ್ಲೇ ಜಗತ್ತಿನ ಹಲವೆಡೆ ಕೆಲವು ಪ್ರಕರಣಗಳು ಪತ್ತೆಯಾಗಿವೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

ಕೆನಡಾದಿಂದ ಹಿಂದಿರುಗಿದ್ದ ವ್ಯಕ್ತಿಯಲ್ಲಿ ಮಂಕಿ ಪಾಕ್ಸ್ ದೃಢಪಟ್ಟಿದ್ದು, ದೇಶದಲ್ಲಿ ಇನ್ನೂ ಕೆಲ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ ಎಂದು ಅಮೆರಿಕದ ರೋಗ ನಿಯಂತ್ರಣ ಮತ್ತು ತಡೆ ಕೇಂದ್ರ ಹೇಳಿದೆ.

ಮುಂಬರುವ ಪರಿಸ್ಥಿತಿ ಎದುರಿಸಲು ತಯಾರಿ ನಡೆಸಿರುವುದಾಗಿ ಅದು ಹೇಳಿದೆ.

ಮಂಕಿ ಪಾಕ್ಸ್ ವೈರಸ್ ಸೋಂಕಿತ ವ್ಯಕ್ತಿಯ ಸಂಪರ್ಕಕ್ಕೆ ಬಂದಿದ್ದ ಎಲ್ಲರಿಗೂ ಆರೋಗ್ಯ ಸಿಬ್ಬಂದಿ ಪರೀಕ್ಷೆ ನಡೆಸುತ್ತಿದೆ. ಆದರೆ, ರೋಗವು ಸದ್ಯ ಸಾಂಕ್ರಾಮಿಕವಾಗುವ ಸಾಧ್ಯತೆ ಇಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ವಿಶ್ವದ ಹಲವೆಡೆ ಸೋಂಕು ಪತ್ತೆ

ಪೋರ್ಚುಗಲ್‌ನಲ್ಲಿ ಐದು, ಬ್ರಿಟನ್‌ನಲ್ಲಿ ಎರಡು ಪ್ರಕರಣ ಪತ್ತೆಯಾಗಿವೆ. ಸಾಮಾನ್ಯವಾಗಿ ಆಫ್ರಿಕಾದಲ್ಲಿ ಮಾತ್ರ ಕಂಡುಬರುತ್ತಿದ್ದ ಈ ಸೋಂಕು ಯೂರೋಪ್‌ಗೂ ಕಾಲಿಟ್ಟಿರುವುದು ಆತಂಕಕ್ಕೆ ಎಡೆಮಾಡಿದೆ.

ಸ್ಪೇನ್‌ನ ಮ್ಯಾಡ್ರಿಡ್‌ನಲ್ಲೂ 23 ಮಂಕಿ ಪಾಕ್ಸ್ ಶಂಕಿತ ಪ್ರಕರಣಗಳನ್ನು ಗುರುತಿಸಲಾಗಿದ್ದು, ಪರೀಕ್ಷೆ ನಡೆಸಲಾಗುತ್ತಿದೆ.

ಮಂಕಿಪಾಕ್ಸ್ ಎಂದರೇನು?

ಸಿಡುಬು ರೋಗಕ್ಕೆ ಕಾರಣವಾಗುವ ವೆರಿಯೊಲಾ ವೈರಸ್ ಮತ್ತು ಸಿಡುಬು ಲಸಿಕೆಯಲ್ಲಿ ಬಳಸಲಾದ ವ್ಯಾಕ್ಸಿನಿಯಾ ವೈರಸ್‌ನ ಆರ್ಥೋಪಾಕ್ಸ್ ವೈರಸ್ ಕುಟುಂಬಕ್ಕೆ ಸೇರಿದ ಸೋಂಕು ಇದಾಗಿದೆ. ಮಂಕಿಪಾಕ್ಸ್ ಸಿಡುಬುಗೆ ಹೋಲಿಸಬಹುದಾದ ರೋಗಲಕ್ಷಣಗಳನ್ನು ಹೊಂದಿದೆ

1980 ರಲ್ಲಿ ಸಿಡುಬು ರೋಗವನ್ನು ಪ್ರಪಂಚದಾದ್ಯಂತ ಲಸಿಕೆ ಅಭಿಯಾನದ ಮೂಲಕ ನಿರ್ಮೂಲನೆ ಮಾಡಲಾಗಿತ್ತು. ಆದರೆ, ಮಂಕಿಪಾಕ್ಸ್ ಇನ್ನೂ ಮಧ್ಯ ಮತ್ತು ಪಶ್ಚಿಮ ಆಫ್ರಿಕಾದ ಹಲವಾರು ರಾಷ್ಟ್ರಗಳಲ್ಲಿ ಮತ್ತು ಇತರೆಡೆಗಳಲ್ಲಿ ಅಸ್ತಿತ್ವದಲ್ಲಿದೆ.

ರೋಗ ಲಕ್ಷಣ

ಮಂಕಿಪಾಕ್ಸ್‌ನಲ್ಲಿ ಮೈಮೇಲೆ ಕೆಂಪು ದದ್ದುಗಳ ಜೊತೆಗೆ ಜ್ವರದ ರೋಗಲಕ್ಷಣಗಳು ಕಂಡುಬರುತ್ತವೆ. ಜ್ವರ, ನೆಗಡಿ, ತಲೆನೋವು, ಮೈ ಕೈ ನೋವು ಇವೇ ಮುಂತಾದ ರೋಗ ಲಕ್ಷಣಗಳು ಇರುತ್ತವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT