ವಾಷಿಂಗ್ಟನ್: ಹೂಡಿಕೆ ಹಾಗೂ ಉದ್ಯೋಗ ಸೃಷ್ಟಿಗೆ ಒತ್ತು ನೀಡುವ ಮೂಲಕ ಚೀನಾಕ್ಕೆ ತಿರುಗೇಟು ನೀಡಲು ಪ್ಯಾಕೇಜ್ ರೂಪಿಸುವ ಸಂಬಂಧ ಮಸೂದೆಯನ್ನು ಸಿದ್ಧಪಡಿಸುವಂತೆ ಸೆನೆಟ್‌ನಲ್ಲಿ ಡೆಮಾಕ್ರಟಿಕ್ ನಾಯಕ ಚಕ್ ಶೂಮರ್ ಅವರು ಪಕ್ಷದ ಸಂಸದರಿಗೆ ಸೂಚಿಸಿದ್ದಾರೆ.

ನ್ಯಾಟೊ ಮೈತ್ರಿಕೂಟದ ರಾಷ್ಟ್ರಗಳು ಹಾಗೂ ಭಾರತದಲ್ಲಿ ಬಂಡವಾಳ ಹೂಡಿಕೆಗೆ ಉತ್ತೇಜನ ನೀಡುವುದು, ಅಮೆರಿಕನ್ನರಿಗೆ ಉದ್ಯೋಗ ಭದ್ರತೆ ಒದಗಿಸುವುದು ಈ ಮಸೂದೆಯ ಪ್ರಮುಖ ಅಂಶಗಳಾಗಲಿವೆ ಎಂದು ಶೂಮರ್ ತಿಳಿಸಿದ್ದಾರೆ.

ಈ ಚಳಿಗಾಲದ ಅಧಿವೇಶನದಲ್ಲಿ ಈ ಮಸೂದೆಯನ್ನು ಸೆನೆಟ್‌ನಲ್ಲಿ ಮಂಡಿಸಿ, ಅನುಮೋದನೆ ಪಡೆಯುವ ಉದ್ದೇಶ ಹೊಂದಲಾಗಿದೆ ಎಂದೂ ಅವರು ಹೇಳಿದ್ದಾರೆ.

‘ಅಮೆರಿಕದಲ್ಲಿ ಹೆಚ್ಚು ಬಂಡವಾಳ ಹೂಡಿಕೆಯಾಗುವಂತೆ ನೋಡಿಕೊಳ್ಳಬೇಕು, ಆಗ್ನೇಯ ಏಷ್ಯಾ, ಭಾರತದಲ್ಲಿ ಉತ್ಪಾದನಾ ಕ್ಷೇತ್ರದಲ್ಲಿ ಹೂಡಿಕೆಯನ್ನು ಹೆಚ್ಚಿಸಬೇಕು, ಚೀನಾದ ಕುತಂತ್ರಗಳನ್ನು ಜಗತ್ತಿಗೆ ತಿಳಿಸಬೇಕು. ಈ ಪ್ರಮುಖ ಗುರಿಗಳನ್ನು ಸಾಧಿಸುವ ಮೂಲಕ ಚೀನಾವನ್ನು ಸ್ಪರ್ಧೆಯಿಂದ ಹಿಂದಿಕ್ಕಬೇಕು’ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.