ಗುರುವಾರ , ಆಗಸ್ಟ್ 5, 2021
21 °C

ಅಮೆರಿಕದ ಪೋರ್ಟ್‌ಲ್ಯಾಂಡ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಸಾವು

ಎಪಿ Updated:

ಅಕ್ಷರ ಗಾತ್ರ : | |

ಪೋರ್ಟ್‌ಲ್ಯಾಂಡ್ (ಅಮೆರಿಕ): ಅಮೆರಿಕದ ಒರೆಗನ್‌ನ ಅತಿ ದೊಡ್ಡ ನಗರ ಪೋರ್ಟ್‌ಲ್ಯಾಂಡ್‌ನಲ್ಲಿ ಶನಿವಾರ ನಡೆದ ನಾಲ್ಕು ಬೇರೆ ಬೇರೆ ಗುಂಡಿನ ದಾಳಿಯ ಪ್ರಕರಣದಲ್ಲಿ ಇಬ್ಬರು ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ.

ಕಳೆದ ಆರು ತಿಂಗಳಿನಿಂದ ಶೂಟೌಟ್ ಪ್ರಕರಣಗಳು ಹೆಚ್ಚುತ್ತಿವೆ. ಅಲ್ಲದೆ ಕಳೆದೊಂದು ವರ್ಷದಲ್ಲಿ 125 ಪೊಲೀಸರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ: 

ಮಿನ್ನಿಯಾಪೊಲಿಸ್ ಬಿಳಿ ಪೊಲೀಸರಿಂದ ಕಪ್ಪು ವರ್ಣೀಯ ಜಾರ್ಜ್ ಫ್ಲಾಯ್ಡ್ ಹತ್ಯೆಯ ಬಳಿಕ ಪೊಲೀಸ್ ದೌರ್ಜನ್ಯ ಹಾಗೂ ಜನಾಂಗೀಯ ನಿಂದನೆಯ ವಿರುದ್ಧ ಪ್ರತಿಭಟನೆಯ ಕಾವು ಜೋರಾಗಿದೆ. ಅಲ್ಲದೆ ಹಿಂಸಾಚಾರ ಪ್ರಕರಣಗಳು ವರದಿಯಾಗುತ್ತಿವೆ.

38 ತಾಸಿನ ಅವಧಿಯಲ್ಲಿ 11 ಕಡೆಗಳಲ್ಲಿ ಶೂಟೌಟ್ ಪ್ರಕರಣಗಳು ವರದಿಯಾಗಿದ್ದು, 13 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೋರ್ಟ್‌ಲ್ಯಾಂಡ್‌ನಲ್ಲಿ ನಡೆದ ಮೊದಲ ಪ್ರಕರಣದಲ್ಲಿ 18 ವರ್ಷದ ಯುವತಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದಾರೆ. ಇದರ ಹಿಂದಿನ ಕಾರಣಗಳು ತಿಳಿದುಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ವಿಡಿಯೊ ಅಥವಾ ಚಿತ್ರಗಳಿದ್ದರೆ ತಕ್ಷಣ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಕೋರಲಾಗಿದೆ.

ಇದಾದ ಕೆಲವೇ ತಾಸಿನಲ್ಲಿ ನಗರದ ವಿವಿಧ ಭಾಗಗಳಲ್ಲಿ ಮೂರು ಗುಂಡಿನ ದಾಳಿ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ಓರ್ವ ಮೃತಪಟ್ಟಿದ್ದಾರೆ.

ಈ ವರ್ಷ ಪೋರ್ಟ್‌ಲ್ಯಾಂಡ್‌ನಲ್ಲಿ ಇದುವರೆಗೆ 570 ಗುಂಡಿನ ದಾಳಿ ಪ್ರಕರಣಗಳು ನಡೆದಿವೆ. ಕಳೆದ ವರ್ಷಕ್ಕೆ ಹೋಲಿಸಿದಾಗ ಶೂಟೌಟ್ ಪ್ರಕರಣ ಇಮ್ಮಡಿಯಾಗಿದ್ದು, ಬಹುತೇಕ ಪ್ರಕರಣಗಳು ಗ್ಯಾಂಗ್ ಸಂಬಂಧಿತ ಘರ್ಷಣೆಯಾಗಿದೆ ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು