ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಕ್ರೇನ್ ಬಿಕ್ಕಟ್ಟು: ರಷ್ಯಾ ಮೇಲೆ ನಿರ್ಬಂಧಗಳನ್ನು ಹೇರಲು ಮುಂದಾದ ಅಮೆರಿಕ

Last Updated 22 ಫೆಬ್ರುವರಿ 2022, 3:29 IST
ಅಕ್ಷರ ಗಾತ್ರ

ಮಾಸ್ಕೊ: ರಷ್ಯಾ ಬಂಡುಕೋರರ ಹಿಡಿತದಲ್ಲಿರುವ ಪೂರ್ವ ಉಕ್ರೇನ್‌ನ ಎರಡು ಪ್ರದೇಶಗಳನ್ನು ಸ್ವತಂತ್ರ ಎಂದು ಘೋಷಿಸಲು ಮುಂದಾಗಿರುವ ರಷ್ಯಾ ವಿರುದ್ಧ ಅಮೆರಿಕ ಅಧ್ಯಕ್ಷ ಜೋ ಬೈಡನ್ ಹೊಸ ನಿರ್ಬಂಧಗಳನ್ನು ವಿಧಿಸಲು ನಿರ್ಧರಿಸಿದ್ದಾರೆ ಎಂದು ಶ್ವೇತಭವನ ಹೇಳಿದೆ.

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಸೋಮವಾರ ಮಾಡಿದ ಘೋಷಣೆಯನ್ನು ಬೈಡನ್ ಆಡಳಿತವು ‘ರಷ್ಯಾದ ಅಂತರರಾಷ್ಟ್ರೀಯ ಬದ್ಧತೆಗಳ ಸ್ಪಷ್ಟ ಉಲ್ಲಂಘನೆ’ ಎಂದು ಕರೆದಿದೆ.

ರಷ್ಯಾ, ಸ್ವತಂತ್ರ ಎಂದು ಘೋಷಿಸಲು ಮುಂದಾಗಿರುವ ಉಕ್ರೇನ್‌ನ ಎರಡು ಪ್ರದೇಶಗಳಲ್ಲಿ ಹೊಸ ಹೂಡಿಕೆ, ವ್ಯಾಪಾರ ಮತ್ತು ಹಣಕಾಸು ವ್ಯವಹಾರವನ್ನು ನಡೆಸದಂತೆ ನಿರ್ಬಂಧ ಹೇರಲು ಅಮೆರಿಕ ಮುಂದಾಗಿದೆ.

ಐರೋಪ್ಯ ಒಕ್ಕೂಟದ ಉನ್ನತ ಅಧಿಕಾರಿಗಳು ಕೂಡ ನಿರ್ಬಂಧಗಳನ್ನು ವಿಧಿಸುವುದಾಗಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT