ಸೋಮವಾರ, ಮೇ 17, 2021
23 °C

ಕೋವಿಡ್‌ ಉಲ್ಬಣ: ಭಾರತದಿಂದ ಪ್ರಯಾಣ ನಿರ್ಬಂಧಿಸಿದ ಅಮೆರಿಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್: ದೇಶದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಅಮರಿಕಕ್ಕೆ ಭಾರತದಿಂದ ಪ್ರಯಾಣ ಮಾಡುವುದನ್ನು ನಿರ್ಬಂಧಿಸಲಾಗಿದೆ ಎಂದು ಬೈಡನ್‌ ಸರ್ಕಾರ ಅಧಿಕೃತ ಪ್ರಕಟನೆಯಲ್ಲಿ ತಿಳಿಸಿದೆ.

ಸರ್ಕಾರಿ ರೋಗ ನಿಯಂತ್ರಣ ಸಂಸ್ಥೆಗಳ ಸಲಹೆಯ ಮೇರೆಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಜೆನ್ ಸಾಕಿ ಹೇಳಿದ್ದಾರೆ.

ಈ ನಿಯಮ ಅಮೆರಿಕನ್ ನಾಗರಿಕರು, ಶಾಶ್ವತ ನಿವಾಸಿಗಳು ಅಥವಾ ಇತರ ವಿನಾಯಿತಿ ಪಡೆದವರಿಗೆ ಅನ್ವಯಿಸುವುದಿಲ್ಲ. ಈ ನಿಯಮ ಬರುವ ಮಂಗಳವಾರದಿಂದ ( ಮೇ 4) ಜಾರಿಯಾಗಲಿದೆ ಎಂದು ಜೆನ್ ಸಾಕಿ ತಿಳಿಸಿದ್ದಾರೆ.

ದೇಶದಲ್ಲಿ ಶುಕ್ರವಾರ 3.86 ಲಕ್ಷ ಹೊಸ ಕೋವಿಡ್ -19 ಪ್ರಕರಣಗಳು ಮತ್ತು 3,498 ಸಾವುಗಳು ವರದಿಯಾಗಿವೆ. ಈಗಾಗಲೇ ಕೆನಡಾ, ಯುಎಇ ಸೇರಿದಂತೆ ಹಲವು ದೇಶಗಳು ಭಾರತದ ಪ್ರಯಾಣವನ್ನು ತಾತ್ಕಾಲಿಕವಾಗಿ ನಿಷೇಧಿಸಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು