ಭಾನುವಾರ, ಅಕ್ಟೋಬರ್ 24, 2021
25 °C

ಅನೇಕರಿಗೆ ಕಮಲಾ ಹ್ಯಾರಿಸ್‌ ಸ್ಫೂರ್ತಿದಾಯಕ: ನರೇಂದ್ರ ಮೋದಿ ಶ್ಲಾಘನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಾಷಿಂಗ್ಟನ್‌: ‘ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಅವರು ವಿಶ್ವದ ನೂರಾರು ಜನರಿಗೆ ಸ್ಫೂರ್ತಿಯ ಸೆಲೆಯಾಗಿದ್ದಾರೆ. ಅಧ್ಯಕ್ಷ ಜೋ ಬೈಡನ್‌ ಹಾಗೂ ಕಮಲಾ ಹ್ಯಾರಿಸ್‌ ಅವರ ನಾಯಕತ್ವದಲ್ಲಿ ಭಾರತ ಮತ್ತು ಅಮೆರಿಕ ನಡುವಿನ ದ್ವಿಪಕ್ಷೀಯ ಸಂಬಂಧ ಹೊಸ ಎತ್ತರ ತಲುಪಲಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದರು.

ದ್ವಿಪಕ್ಷೀಯ ಮಾತುಕತೆಗೂ ಮುನ್ನ ಶ್ವೇತಭವನದಲ್ಲಿ ಉಭಯ ನಾಯಕರು ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಮೋದಿ ಅವರು ಈ ಮೆಚ್ಚುಗೆಯ ಮಾತುಗಳನ್ನಾಡಿದರು.

‘ನೀವು ಅಮೆರಿಕದ ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದು ಐತಿಹಾಸಿಕ ಹಾಗೂ ಮಹತ್ವದ ಕ್ಷಣ. ವಿಶ್ವದ ಅನೇಕರಿಗೆ ನೀವು ಪ್ರೇರಣೆಯಾಗಿದ್ದೀರಿ’ ಎಂದು ಕಮಲಾ ಹ್ಯಾರಿಸ್ ಅವರನ್ನು ಉದ್ದೇಶಿಸಿ ಮೋದಿ ಹೇಳಿದರು.

ಭಾರತಕ್ಕೆ ಭೇಟಿ ನೀಡುವಂತೆ ಕಮಲಾ ಹ್ಯಾರಿಸ್‌ ಹಾಗೂ ಪತಿ ಡಗ್ಲಾಸ್‌ ಎಮ್‌ಹಾಫ್‌ ಅವರಿಗೆ ಇದೇ ಸಂದರ್ಭದಲ್ಲಿ ಮೋದಿ ಅವರು ಆಹ್ವಾನ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು