ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

20 ವರ್ಷಗಳ ಬಳಿಕ ಪೂರ್ತಿಯಾಗಿ ಅಫ್ಗಾನಿಸ್ತಾನ ತೊರೆದ ಅಮೆರಿಕ ಪಡೆ

Last Updated 31 ಆಗಸ್ಟ್ 2021, 1:59 IST
ಅಕ್ಷರ ಗಾತ್ರ

ಕಾಬೂಲ್: ಅಫ್ಗಾನಿಸ್ತಾನದಿಂದ ತೆರವು ಕಾರ್ಯಾಚರಣೆಯನ್ನು ಪೂರ್ಣಗೊಳಿಸಿರುವುದಾಗಿ ಅಮೆರಿಕ ಘೋಷಿಸಿದೆ.

ಅಮೆರಿಕ ಯೋಧರನ್ನೊಳಗೊಂಡ ಐದು ‘ಸಿ–17’ ವಿಮಾನಗಳು ಸೋಮವಾರ ಮಧ್ಯರಾತ್ರಿ ವೇಳೆಗೆ ಕಾಬೂಲ್‌ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತೆರಳಿವೆ ಎಂದು ಅಮೆರಿಕದ ಅಧಿಕಾರಿಗಳು ತಿಳಿಸಿದ್ದಾರೆ.

ಅಫ್ಗಾನಿಸ್ತಾನದೊಂದಿಗೆ ಅಮೆರಿಕದ ಹೊಸ ಅಧ್ಯಾಯ ಆರಂಭವಾಗಿದೆ. ಅಫ್ಗಾನಿಸ್ತಾನದಲ್ಲಿ ಸೇನಾ ಕಾರ್ಯಾಚರಣೆಯನ್ನು ನಾವು ಮುಕ್ತಾಯಗೊಳಿಸಿದ್ದೇವೆ. ಇನ್ನು ರಾಜತಾಂತ್ರಿಕತೆಯೊಂದಿಗೆ ಮುಂದುವರಿಯಲಿದ್ದೇವೆ ಎಂದು ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್ ತಿಳಿಸಿರುವುದಾಗಿ ‘ನ್ಯೂಯಾರ್ಕ್ ಟೈಮ್ಸ್’ ವರದಿ ಮಾಡಿದೆ.

ಆಗಸ್ಟ್ 31ರ ಒಳಗೆ ತೆರವು ಕಾರ್ಯಾಚರಣೆ ಪೂರ್ಣಗೊಳಿಸುವುದಾಗಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಹೇಳಿದ್ದರು.

ಅಫ್ಗಾನಿಸ್ತಾನದಿಂದ ಅಮೆರಿಕನ್ನರ ತೆರವುಗೊಳಿಸುವ ಸೇನಾ ಕಾರ್ಯಾಚರಣೆ ಪೂರ್ಣಗೊಂಡಿದೆ ಎಂದು ಅಮೆರಿಕ ಸೇನೆಯ ಜನರಲ್ ಕೆನೆತ್ ಮೆಕೆಂಝಿ ತಿಳಿಸಿರುವುದಾಗಿ ‘ಎಎಫ್‌ಪಿ’ ಸುದ್ದಿಸಂಸ್ಥೆ ವರದಿ ಮಾಡಿದೆ.

2001ರ ಸೆಪ್ಟೆಂಬರ್ 11ರಂದು ಅಮೆರಿಕದ ವಿಶ್ವ ವಾಣಿಜ್ಯ ಕಟ್ಟಡಗಳ ಮೇಲೆ ಅಲ್‌-ಕೈದಾ ಉಗ್ರರು ದಾಳಿ ನಡೆಸಿದ್ದರು. ಆ ದಾಳಿಯ ಪ್ರತೀಕಾರವಾಗಿ ಅಮೆರಿಕವು ಅಲ್‌-ಕೈದಾ ಉಗ್ರರ ವಿರುದ್ಧ ಹೋರಾಡಲು ಅಫ್ಗಾನಿಸ್ತಾನದಲ್ಲಿ ಸೇನಾ ಕಾರ್ಯಾಚರಣೆ ನಡೆಸಿತ್ತು. ತಾಲಿಬಾನಿಗಳ ವಿರುದ್ಧವೂ ಹೋರಾಟ ನಡೆಸಿದ್ದ ಅಮೆರಿಕವು, ಅಫ್ಗನ್‌ನಲ್ಲಿ ಸರ್ಕಾರ ರಚಿಸಲು ನೆರವು ನೀಡಿತ್ತು.

ಈ 20 ವರ್ಷಗಳ ಅವಧಿಯಲ್ಲಿ ಅಮೆರಿಕದ ಸೇನೆಯು ಉಗ್ರರ ವಿರುದ್ಧ ಹೋರಾಡಿತ್ತಲ್ಲದೆ, ಅಫ್ಗನ್ ಸೈನಿಕರಿಗೆ ತರಬೇತಿ ನೀಡಿತ್ತು. ಅಫ್ಗನ್ ಸೇನೆಗೆ ಭಾರಿ ಪ್ರಮಾಣದ ಶಸ್ತ್ರಾಸ್ತ್ರ ಪೂರೈಕೆ ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT