ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಪರಿಸ್ಥಿತಿ ನಿಭಾಯಿಸಲು ಭಾರತಕ್ಕೆ ಸಹಕಾರ: ಅಮೆರಿಕ ಭರವಸೆ

Last Updated 24 ಏಪ್ರಿಲ್ 2021, 6:47 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ‘ಭಾರತದಲ್ಲಿ ಕೋವಿಡ್‌ ಪ್ರಕರಣಗಳು ತೀವ್ರವಾಗಿ ಏರುತ್ತಿವೆ. ಪ್ರಸ್ತುತ ಕೋವಿಡ್‌ ಪರಿಸ್ಥಿತಿಯನ್ನು ನಿಭಾಯಿಸುವ ಮಾರ್ಗೋಪಾಯಗಳನ್ನು ಕಂಡುಕೊಳ್ಳುವ ನಿಟ್ಟಿನಲ್ಲಿಅಮೆರಿಕವು ಭಾರತದೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದೆ’ ಎಂದು ಅಮೆರಿಕದ ಅಧಿಕಾರಿಗಳು ತಿಳಿಸಿದರು.

ಕೋವಿಡ್‌ ಲಸಿಕೆ ಮತ್ತು ಸೋಂಕಿಗೆ ಸಂಬಂಧಿಸಿದ ಔಷಧಿಗಳನ್ನು ಭಾರತಕ್ಕೆ ಕಳುಹಿಸುವಂತೆ ವಿವಿಧ ಭಾಗಗಳಿಂದ ಅಮೆರಿಕದ ಮೇಲೆ ಒತ್ತಡ ಬರುತ್ತಿರುವಂತೆಯೇಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಜೆನ್ ಸಾಕಿ ಈ ಹೇಳಿಕೆ ನೀಡಿದ್ದಾರೆ.

‘ಈ ಬಿಕ್ಕಟ್ಟನ್ನು ನಿಭಾಯಿಸಲು ಅಮೆರಿಕವು ಭಾರತದ ಅಧಿಕಾರಿಗಳು ಮತ್ತು ತಜ್ಞರೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದೆ. ‘ಕ್ವಾಡ್‌’ ಪಾಲುದಾರರಿಗೆ ಲಸಿಕೆ ಸಂಬಂಧಿತ ಸಹಕಾರವನ್ನು ಒದಗಿಸುವುದು ನಮ್ಮ ದೊಡ್ಡ ಆದ್ಯತೆಯಾಗಿದೆ. ಭಾರತ ಕೂಡ ಕ್ವಾಡ್‌ ಸದಸ್ಯನಾಗಿದ್ದು, ಅದರೊಂದಿಗೆ ಲಸಿಕೆ ಅಭಿವೃದ್ದಿ ಮತ್ತು ಲಸಿಕೆ ವಿತರಣೆ ಬಗ್ಗೆ ಚರ್ಚೆ ನಡೆಸುತ್ತಿದ್ದೇವೆ. ಕೋವ್ಯಾಕ್ಸ್‌ ಲಸಿಕೆಯನ್ನು ಕೂಡ ಒದಗಿಸಲಾಗುತ್ತದೆ’ ಎಂದು ಅವರು ಹೇಳಿದರು.

‘ಸಾಂಕ್ರಾಮಿಕದ ಆರಂಭದಲ್ಲಿ ನಾವು ಭಾರತಕ್ಕೆ ತುರ್ತು ಪರಿಹಾರ ಸಾಮಗ್ರಿಗಳು, ವೈದ್ಯಕೀಯ ಸಂಬಂಧಿಸಿದ ವಸ್ತುಗಳು, ಭಾರತೀಯ ರಾಜ್ಯ ಮತ್ತು ಸ್ಥಳೀಯ ಆರೋಗ್ಯ ಅಧಿಕಾರಿಗಳಿಗೆ ಸಾಂಕ್ರಾಮಿಕ ತರಬೇತಿ ಹಾಗೂ ವೆಂಟಿಲೇಟರ್‌ಗಳನ್ನು ಒದಗಿಸಿದ್ದೇವೆ. ಜತೆಗೆ 1.4 ಶತಕೋಟಿ ಡಾಲರ್ ಮೊತ್ತದ ಆರೋಗ್ಯ ನೆರವು ಕೂಡ ನೀಡಿದ್ದೇವೆ ಎಂದು ಅವರು ಮಾಹಿತಿ ನೀಡಿದರು.

‘ಭಾರತದಲ್ಲಿ ಅತಿ ಹೆಚ್ಚು ಹೊಸ ಪ್ರಕರಣಗಳು ವರದಿಯಾಗುತ್ತಿವೆ. ಈವರೆಗೆ ಯಾವುದೇ ದೇಶದಲ್ಲಿ ಈ ಪ್ರಮಾಣದಲ್ಲಿ ಹೊಸ ಪ್ರಕರಣಗಳು ವರದಿಯಾಗಿಲ್ಲ. ಭಾರತ ಬಹಳ ಕಷ್ಟಕರ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಹೆಚ್ಚಿನ ಜನರಿಗೆ ಆದಷ್ಟು ಬೇಗ ಲಸಿಕೆಯನ್ನು ನೀಡಬೇಕು.ಭಾರತಕ್ಕೆ ಲಸಿಕೆಯ ಹೆಚ್ಚಿನ ಅವಶ್ಯಕತೆಯಿದೆ’ ಎಂದು ಅಧ್ಯಕ್ಷ ಜೋ ಬೈಡನ್‌ ಅವರ ಮುಖ್ಯ ವೈದ್ಯಕೀಯ ಸಲಹೆಗಾರ ಆಂಥೋನಿ ಫೌಸಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT