ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೋ ಬೈಡನ್‌, ಕಮಲಾ ಹ್ಯಾರಿಸ್‌ ಜಯವನ್ನು ದೃಢಪಡಿಸಿದ ಅಮೆರಿಕ ಕಾಂಗ್ರೆಸ್‌

Last Updated 7 ಜನವರಿ 2021, 10:43 IST
ಅಕ್ಷರ ಗಾತ್ರ

ವಾಷಿಂಗ್ಟನ್: ಜೋ ಬೈಡನ್ ಅವರ ಎಲೆಕ್ಟೋರಲ್ ಕಾಲೇಜ್ ಮತಗಳನ್ನು ಎಣಿಸುವ ಮತ್ತು ಪ್ರಮಾಣೀಕರಿಸುವ ಪ್ರಕ್ರಿಯೆಯನ್ನು ಅಮೆರಿಕ ಕಾಂಗ್ರೆಸ್ ಗುರುವಾರ ಪೂರ್ಣಗೊಳಿಸಿದೆ. ಆ ಮೂಲಕ ಜೋ ಬೈಡನ್‌ ಅವರು ಅಮೆರಿಕದ 46ನೇ ಅಧ್ಯಕ್ಷರೆಂದು ದೃಢಪಡಿಸಲಾಗಿದೆ.

ಈ ಪ್ರಕ್ರಿಯೆಗೂ ಮುನ್ನ ಡೊನಾಲ್ಡ್ ಟ್ರಂಪ್ ಅವರ ಸಾವಿರಾರು ಬೆಂಬಲಿಗರು ಅಮೆರಿಕ ಕ್ಯಾಪಿಟಲ್ (ಸಂಸತ್) ಒಳಗೆ ನುಗ್ಗಿ ಪೊಲೀಸರೊಂದಿಗೆ ಸಂಘರ್ಷಕ್ಕೆ ಇಳಿದಿದ್ದರು. ಘಟನೆಯಲ್ಲಿ ಐವರು ಮೃತಪಟ್ಟಿದ್ದು, ಅನೇಕ ಮಂದಿ ಗಾಯಗೊಂಡಿದ್ದಾರೆ. ಅಲ್ಲದೆ ಪರಿಸ್ಥಿತಿ ನಿಯಂತ್ರಣಕ್ಕಾಗಿ ಕರ್ಫ್ಯೂ ಹೇರಲಾಗಿದೆ.

ಕಳೆದ ನವೆಂಬರ್‌ನಲ್ಲಿ ನಡೆದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಜೋ ಬಿಡೆನ್ ಗೆಲುವನ್ನು ಟ್ರಂಪ್ ಬೆಂಬಲಿಗರು ವಿರೋಧಿಸುತ್ತಿದ್ದಾರೆ. ಈ ಮಧ್ಯೆ ಘಟನೆಯನ್ನು ಖಂಡಿಸಿರುವ ಅಮೆರಿಕದ ನಿಯೋಜಿತ ಅಧ್ಯಕ್ಷ ಜೋ ಬೈಡನ್, ಇದು ಅಮೆರಿಕ ಇತಿಹಾಸದ ಅತ್ಯಂತ 'ಕರಾಳ ಕ್ಷಣ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಘಟನೆ ಬಗ್ಗೆ ಟ್ವೀಟ್ ಮಾಡಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 75ನೇ ಅಧಿವೇಶನದ ಅಧ್ಯಕ್ಷ ವೋಲ್ಕಾನ್ ಬೊಜ್ಕಿರ್, ‘ವಾಷಿಂಗ್ಟನ್‌ನಲ್ಲಿ ನಡೆದ ಘಟನೆಯಿಂದ ತೀವ್ರ ಬೇಸರವಾಗಿದೆ‘ ಎಂದು ಪೋಸ್ಟ್ ಮಾಡಿದ್ದಾರೆ. ‘ಪ್ರಜಾಪ್ರಭುತ್ವ ಹೊಂದಿರುವ ವಿಶ್ವದ ಪ್ರಮುಖ ರಾಷ್ಟ್ರಗಳಲ್ಲಿ ಅಮೆರಿಕವೂ ಒಂದಾಗಿದೆ. ಇಂಥ ನಿರ್ಣಾಯಕ ಸಮಯದಲ್ಲಿ ನಮ್ಮ ಆತಿಥೇಯ ದೇಶದಲ್ಲಿ ಪ್ರಜಾಪ್ರಭುತ್ವ ಪ್ರಕ್ರಿಯೆಗಳ ಶಾಂತಿ ಮತ್ತು ಗೌರವವು ಮೇಲುಗೈ ಸಾಧಿಸುತ್ತದೆ ಎಂದು ನಾನು ನಂಬುತ್ತೇನೆ‘ ಎಂದು ಹೇಳಿದ್ದಾರೆ.

ಅಮೆರಿಕ ಕ್ಯಾಪಿಟಲ್ ಹಿಂಸಾಚಾರಕ್ಕೆ ಕುಮ್ಮಕ್ಕುನೀಡಿರುವ ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಕಟುವಾಗಿ ಟೀಕೆ ಮಾಡಿರುವ ಮಾಜಿ ಅಧ್ಯಕ್ಷ ಬರಾಕ್ ಒಬಾಮ, ಇದು ನಮ್ಮ ರಾಷ್ಟ್ರಕ್ಕೆ ಎದುರಾದ ಅಗೌರವ ಹಾಗೂ ಅವಮಾನಕರ ಕ್ಷಣ ಎಂದು ಹೇಳಿದ್ದಾರೆ.

ಕಳೆದ ವರ್ಷ ನವೆಂಬರ್‌ನಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಾಟ್ ಪಕ್ಷದ ಜೋ ಬೈಡನ್ 306 ಎಲೆಕ್ಟೋರಲ್ ಕಾಲೇಜ್ ಮತಗಳನ್ನು ಪಡೆದು ವಿಜಯಿಶಾಲಿಯಾಗಿದ್ದರು. ಅತ್ತ ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ 232 ಮತಗಳನ್ನು ಪಡೆದಿದ್ದರು.

ಇದನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT