ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕದ ಆರೋಗ್ಯ ಇಲಾಖೆಯ ಉನ್ನತ ಹುದ್ದೆಗೆ ಟ್ರಾನ್ಸ್‌ಜೆಂಡರ್ ನೇಮಕ

Last Updated 25 ಮಾರ್ಚ್ 2021, 5:03 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಮಕ್ಕಳ ವೈದ್ಯೆ ರಚೆಲ್‌ ಲೆವಿನ್ ಅವರನ್ನು ಅಧ್ಯಕ್ಷ ಜೋ ಬೈಡನ್‌ ಅವರು ಆರೋಗ್ಯ ಇಲಾಖೆಯ ಸಹಾಯಕ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಿರುವುದಕ್ಕೆ ಯು.ಎಸ್‌ ಸೆನೆಟ್‌ ಅನುಮೋದನೆ ನೀಡಿದೆ.

ರಚೆಲ್‌ ಲೆವಿನ್‌ ಅವರು ಲೈಂಗಿಕ ಅಲ್ಪಸಂಖ್ಯಾತರಾಗಿದ್ದು (ಟ್ರಾನ್ಸ್‌ಜೆಂಡರ್) ಮಕ್ಕಳ ವೈದ್ಯೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಟ್ರಾನ್ಸ್‌ಜೆಂಡರ್ ಒಬ್ಬರನ್ನು ಅಮೆರಿಕದ ಅತ್ಯುನ್ನತ ಶ್ರೇಣಿಯ ಅಧಿಕಾರಿಯಾಗಿ ನೇಮಿಸುವ ಮೂಲಕ ಬೈಡನ್‌ ನೇತೃತ್ವದ ಸರ್ಕಾರವು ಐತಿಹಾಸಿಕ ಹೆಜ್ಜೆಯನ್ನಿರಿಸಿದೆ.

ಲೆವಿನ್ ಅವರ ನಾಮನಿರ್ದೇಶನವನ್ನು ಸೆನೆಟ್‌ 52– 48 ಮತಗಳ ಮೂಲಕ ಅನುಮೋದಿಸಿದೆ. ರಿಪಬ್ಲಿಕನ್‌ ಪಕ್ಷದ ಇಬ್ಬರು ಸೆನೆಟರ್‌ಗಳು ಸಹ ಲೆವನ್‌ ಅವರಿಗೆ ಬೆಂಬಲ ಸೂಚಿಸಿದ್ದಾರೆ.

63 ವರ್ಷ ವಯಸ್ಸಿನ ಲೆವಿನ್‌ ಅವರು ಆರೋಗ್ಯ ಮತ್ತು ಸಾರ್ವಜನಿಕ ಸೇವೆಗಳ ಇಲಾಖೆಯಲ್ಲಿ ಸಹಾಯಕ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಅಮೆರಿಕದಲ್ಲಿ 5,45,000ಕ್ಕೂ ಹೆಚ್ಚು ಮಂದಿಯ ಸಾವಿಗೆ ಕಾರಣವಾಗಿರುವ ಕೊರೊನಾ ಸೋಂಕಿನ ವಿರುದ್ಧದ ಹೋರಾಟವನ್ನು ಮುನ್ನಡೆಸುವ ಅತಿ ಮಹತ್ವದ ತಂಡವೊಂದರ ಭಾಗವಾಗಲಿದ್ದಾರೆ.

ಈ ಆಯ್ಕೆಯು ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನೀತಿಗಳಿಗೆ ವಿರುದ್ಧವಾಗಿದ್ದು, ತಾರತಮ್ಯವನ್ನು ತಗ್ಗಿಸುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರವಾಗಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT