ಮಂಗಳವಾರ, ಮಾರ್ಚ್ 2, 2021
23 °C

ಲಸಿಕೆ ಪಡೆದವರಿಂದಲೂ ಸೋಂಕು ಹರಡುವ ಅಪಾಯ: ಜೊನಾಥನ್‌

ಪಿಟಿಐ Updated:

ಅಕ್ಷರ ಗಾತ್ರ : | |

ಜೊನಾಥನ್‌ ವಾನ್‌ ಟಾಮ್‌

ಲಂಡನ್‌: ‘ಕೋವಿಡ್‌–19 ಲಸಿಕೆ ಪಡೆದಿರುವ ವ್ಯಕ್ತಿಗಳಿಂದ ಇತರರಿಗೆ ಸೋಂಕು ಹರಡುವುದಿಲ್ಲ ಎಂಬುದನ್ನು ನಿರೂಪಿಸಲು ಯಾವ ಆಧಾರಗಳೂ ಇಲ್ಲ. ಹೀಗಾಗಿ ಎಲ್ಲರೂ ಜಾಗೃತರಾಗಿರಬೇಕು. ಕೋವಿಡ್‌ ಮಾರ್ಗಸೂಚಿಗಳನ್ನು ಚಾಚೂ ತಪ್ಪದೆ ಪಾಲಿಸಬೇಕು’ ಎಂದು ಇಂಗ್ಲೆಂಡ್‌ನ ಉಪ ಮುಖ್ಯ ವೈದ್ಯಾಧಿಕಾರಿ ಜೊನಾಥನ್‌ ವಾನ್‌ ಟಾಮ್‌ ಭಾನುವಾರ ಎಚ್ಚರಿಸಿದ್ದಾರೆ.

‘ಲಸಿಕೆ ಹಾಕಿಸಿಕೊಂಡ ತಕ್ಷಣವೇ ರೋಗಿಯ ದೇಹದೊಳಗೆ ರೋಗ ನಿರೋಧಕ ಶಕ್ತಿ ಉತ್ಪತ್ತಿಯಾಗುವುದಿಲ್ಲ. ಅದಕ್ಕೆ ಕನಿಷ್ಠ ಮೂರು ವಾರ ಬೇಕಾಗುತ್ತದೆ. ಲಸಿಕೆ ಅಭಿವೃದ್ಧಿಪಡಿಸಿರುವುದು ಸಂತಸದ ವಿಷಯ. ಹಾಗಂತ ಯಾರೂ ಮೈಮರೆಯಬಾರದು. ಎಲ್ಲರೂ ತಾಳ್ಮೆಯಿಂದ ವರ್ತಿಸಬೇಕು. ಸಾಧ್ಯವಾದಷ್ಟು ಮನೆಯಲ್ಲೇ ಇರಲು ಪ್ರಯತ್ನಿಸಬೇಕು. ಇಂಗ್ಲೆಂಡ್‌ನಲ್ಲಿ ರಾಷ್ಟ್ರೀಯ ಆರೋಗ್ಯ ಸೇವೆ (ಎನ್‌ಎಚ್‌ಎಸ್‌) ಸಿಬ್ಬಂದಿ ನಿಮಿಷಕ್ಕೆ 140 ಮಂದಿಗೆ ಲಸಿಕೆ ನೀಡುತ್ತಿದ್ದಾರೆ. ದೇಶದಲ್ಲಿ ಹೆಚ್ಚುವರಿಯಾಗಿ 32 ಲಸಿಕಾ ಕೇಂದ್ರಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ’ ಎಂದು ಹೇಳಿದ್ದಾರೆ. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು