ಜಕಾರ್ತ: ಇಂಡೋನೇಷ್ಯಾದ ಜಕಾರ್ತದಲ್ಲಿ ಇಸ್ಲಾಮಿಕ್ ಸೆಂಟರ್ ಗ್ರ್ಯಾಂಡ್ ಮಸೀದಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ನವೀಕರಣ ಕಾಮಗಾರಿಯ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಮಸೀದಿಯ ಮೇಲಿದ್ದ ಬೃಹದಾಕಾರದ ಗುಮ್ಮಟ ಕುಸಿದಿದೆ.

ಈ ದೃಶ್ಯವು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:ತೀವ್ರಗೊಂಡ ರಷ್ಯಾ ಆಕ್ರಮಣ: ಉಕ್ರೇನ್ ತೊರೆಯುವಂತೆ ಭಾರತೀಯರಿಗೆ ಸೂಚನೆ

ಬೆಂಕಿಯನ್ನು ನಂದಿಸಲು 10 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ ಎಂದು ಸುದ್ದಿಸಂಸ್ಥೆ 'ಎಎನ್‌ಐ' ವರದಿ ಮಾಡಿದೆ.

ಬೆಂಕಿ ಹೊತ್ತಿಕೊಂಡಿದ್ದರ ಹಿಂದಿನ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.