ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಯೆಟ್ನಾಂ: ಹನೊಯಿಯಲ್ಲಿ 15 ದಿನಗಳ ಲಾಕ್‌ಡೌನ್‌ ಘೋಷಣೆ

ಕೋವಿಡ್‌ ಪ್ರಕರಣಗಳಲ್ಲಿ ಏರಿಕೆ
Last Updated 24 ಜುಲೈ 2021, 6:18 IST
ಅಕ್ಷರ ಗಾತ್ರ

ಹನೊಯಿ, ವಿಯೆಟ್ನಾಂ: ದಕ್ಷಿಣ ಮೆಕಾಂಗ್‌ನ ನದಿ ಮುಖಜ ಪ್ರದೇಶದಲ್ಲಿ ಕೊರೊನಾ ಸೋಂಕು ಹರಡುತ್ತಿದ್ದು, ವಿಯೆಟ್ನಾಂ ರಾಜಧಾನಿ ಹನೊಯಿನಲ್ಲಿ 15 ದಿನಗಳ ಲಾಕ್‌ಡೌನ್‌ ಘೋಷಿಸಲಾಗಿದೆ.

ವಿಯೆಟ್ನಾಂ ಸರ್ಕಾರವು ಶುಕ್ರವಾರ ರಾತ್ರಿ ಈ ಸಂಬಂಧ ಆದೇಶ ಹೊರಡಿಸಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಇಬ್ಬರಿಗಿಂತ ಹೆಚ್ಚು ಜನ ಸೇರುವುದನ್ನು ನಿರ್ಬಂಧಿಸಿದೆ. ಕೇವಲ ಸರ್ಕಾರಿ ಕಚೇರಿಗಳು, ಆಸ್ಪತ್ರೆಗಳು ಕಾರ್ಯನಿರ್ವಹಿಸಲು ಮತ್ತು ಅಗತ್ಯ ಸೇವೆಗಳಿಗೆ ಮಾತ್ರ ಅನುಮತಿ ನೀಡಲಾಗಿದೆ.

ಈ ವಾರದ ಆರಂಭದಲ್ಲಿ ಎಲ್ಲಾ ಹೊರಾಂಗಣ ಚಟುವಟಿಕೆಗಳು ಮತ್ತು ಅಗತ್ಯವಲ್ಲದ ಸೇವೆಗಳ ಸ್ಥಗಿತಕ್ಕೆ ಸೂಚಿಸಲಾಗಿತ್ತು. ಶುಕ್ರವಾರ ಹನೊಯಿಯಲ್ಲಿ ಕೋವಿಡ್‌ನ 70 ಹೊಸ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ವಿಯೆಟ್ನಾಂನಲ್ಲಿ ಕಳೆದ 24 ಗಂಟೆಗಳಲ್ಲಿ 7,295 ಹೊಸ ಪ್ರಕರಣಗಳು ಪತ್ತೆಯಾದಂತಾಗಿದೆ.

ಇದರಲ್ಲಿ 5,000 ಪ್ರಕರಣಗಳು ವಿಯೆಟ್ನಾಂನ ಹೊ–ಚಿ– ಮಿನ್‌ ನಗರದಲ್ಲಿ ಪತ್ತೆಯಾಗಿದ್ದು, ಈ ನಗರದಲ್ಲೂಆಗಸ್ಟ್‌ 1ರ ತನಕ ಲಾಕ್‌ಡೌನ್‌ ಅನ್ನು ವಿಸ್ತರಿಸಲಾಗಿದೆ.

‘ನಿಗದಿಯಂತೆ ಸಂಸತ್‌ನ ಅಧಿವೇಶ ಮಂಗಳವಾರ ಪ್ರಾರಂಭಗೊಳ್ಳಲಿದೆ. ಆದರೆ 17 ದಿನಗಳವರೆಗೆ ನಡೆಯಬೇಕಾಗಿದ್ದ ಅಧಿವೇಶನ 12 ದಿನಗಳು ಮಾತ್ರ ನಡೆಯಲಿದೆ. ಇದರಲ್ಲಿ ಭಾಗಿಯಾಗಲಿರುವ ಎಲ್ಲಾ ಪ್ರತಿನಿಧಿಗಳು ಲಸಿಕೆ ಪಡೆದಿದ್ದಾರೆ. ಅಲ್ಲದೆ ನಿಯಮಿತವಾಗಿ ಕೊರೊನಾ ಪರೀಕ್ಷೆಗೆ ಒಳಪಡುತ್ತಿದ್ದಾರೆ’ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT