ಲಂಡನ್: ಭಾರತದಲ್ಲಿ ನಡೆಯುತ್ತಿರುವ ಕಾನೂನು ಹೋರಾಟಗಳ ಶುಲ್ಕ ಭರಿಸಲು 7,50,000 ಪೌಂಡ್ (₹ 7.70 ಕೋಟಿ) ಬಿಡುಗಡೆ ಮಾಡುವಂತೆ ಉದ್ಯಮಿ ವಿಜಯ್ ಮಲ್ಯ ಅವರು ಮಾಡಿದ ಮನವಿಯನ್ನು ಲಂಡನ್ ಹೈಕೋರ್ಟ್ ತಿರಸ್ಕರಿಸಿದೆ.
ತಮ್ಮ ಮನವಿಗೆ ಸಂಬಂಧಿಸಿದಂತೆ ಪೂರಕ ಸಾಕ್ಷ್ಯಾಧಾರಗಳನ್ನು ಒದಗಿಸುವಲ್ಲಿ ಮಲ್ಯ ವಿಫಲರಾಗಿದ್ದಾರೆ ಎಂದು ನ್ಯಾಯಮೂರ್ತಿ ಅಭಿಪ್ರಾಯಪಟ್ಟಿದ್ದಾರೆ.
ಈ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ರಾಬರ್ಟ್ ಮೈಲ್ಸ್ ಅವರು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ನೇತೃತ್ವದ ಭಾರತೀಯ ಬ್ಯಾಂಕುಗಳ ಒಕ್ಕೂಟದ ಪರವಾಗಿ ತೀರ್ಪು ನೀಡಿದರು.