ಮಂಗಳವಾರ, ಸೆಪ್ಟೆಂಬರ್ 29, 2020
23 °C

ಅಮೆರಿಕ: ಕೋವಿಡ್‌ ಪರೀಕ್ಷೆಯಲ್ಲಿ ಇಳಿಕೆ

ಎಪಿ Updated:

ಅಕ್ಷರ ಗಾತ್ರ : | |

Prajavani

ವಾಷಿಂಗ್ಟನ್‌: ವಿಶ್ವದಲ್ಲಿ ಅತಿ ಹೆಚ್ಚು ಕೋವಿಡ್‌ ಪರೀಕ್ಷೆ ನಡೆಸಿದ ದೇಶ  ಎಂದು ಘೋಷಿಸಿಕೊಂಡಿದ್ದ ಅಮೆರಿಕದಲ್ಲಿ ಈಗ ಪರೀಕ್ಷೆಗಳ ಸಂಖ್ಯೆಯಲ್ಲಿ ಇಳಿಮುಖ ಕಂಡು ಬಂದಿದೆ. ಆದರೆ, ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಪ್ರತಿ ದಿನ 1000ಕ್ಕೂ ಹೆಚ್ಚು ಮಂದಿ ಕೋವಿಡ್‌ಗೆ ಬಲಿಯಾಗುತ್ತಿದ್ದಾರೆ.

‘ಕೋವಿಡ್‌ ಪರೀಕ್ಷೆಗೆ ಒಳಗಾಗಲು  ಹಲವು ಗಂಟೆಗಳ ಕಾಲ ಕಾಯಬೇಕು ಮತ್ತು ವರದಿ ಪಡೆಯಲು ಅತಿ ಹೆಚ್ಚು ಸಮಯ ತೆಗೆದುಕೊಳ್ಳಲಾಗುತ್ತಿದೆ. ಕೆಲವೊಮ್ಮೆ ವಾರಗಳಷ್ಟು ತೆಗೆದುಕೊಳ್ಳಲಾಗುತ್ತಿದೆ. ಹೀಗಾಗಿ, ನಾಗರಿಕರು ಕೋವಿಡ್‌ ಪರೀಕ್ಷೆಗೆ ಒಳಗಾಗಲು ನಿರುತ್ಸಾಹ ತೋರುತ್ತಿದ್ದಾರೆ’ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

‘ಕೆಲವೇ ನಿಮಿಷಗಳಲ್ಲಿ ಕೊರೊನಾ ವೈರಸ್ ಸೋಂಕಿನ ಪರೀಕ್ಷೆ ನಡೆಸುವ ವಿಧಾನಗಳನ್ನು ಪರಿಚಯಸಬೇಕು. ಈ ವಿಧಾನಗಳು ಸರಳ ಮತ್ತು ಅಗ್ಗವಾಗಿದೆ. ಆದರೆ ಇಂತಹ ಪರೀಕ್ಷೆಗಳು ಕಡಿಮೆ ನಿಖರತೆಯನ್ನು ಹೊಂದಿರುವ ಸಾಧ್ಯತೆಗಳಿವೆ’ ಎಂದು ಆರೋಗ್ಯ ಅಧಿಕಾರಿಗಳು ಹೇಳಿದ್ದಾರೆ.

ಅಮೆರಿಕದಲ್ಲಿ ಈವರೆಗೆ 50 ಲಕ್ಷ ಜನರಲ್ಲಿ ಸೋಂಕು ಧೃಢಪಟ್ಟಿದ್ದು, 1,57,000ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು