ಗುರುವಾರ , ಫೆಬ್ರವರಿ 9, 2023
30 °C

ಪಾಕ್‌ ರಾಯಭಾರ ಕಚೇರಿ ಮೇಲೆ ದಾಳಿ: ಅಮೆರಿಕ ಖಂಡನೆ

ಎಪಿ Updated:

ಅಕ್ಷರ ಗಾತ್ರ : | |

ಇಸ್ಲಾಮಾಬಾದ್‌ (ಪಿಟಿಐ): ಅಫ್ಗಾನಿಸ್ತಾನದ ರಾಜಧಾನಿಯಲ್ಲಿರುವ ಪಾಕಿಸ್ತಾನ ರಾಯಭಾರಿ ಕಚೇರಿ ಮೇಲೆ ಶುಕ್ರವಾರ ನಡೆದ ದಾಳಿಯನ್ನು ಅಮೆರಿಕ ಖಂಡಿಸಿದೆ.

ಘಟನೆ ಬಗ್ಗೆ ಸಹಾನುಭೂತಿ ವ್ಯಕ್ತಪಡಿಸಿ, ಗಾಯಾಳು ಬೇಗ ಗುಣಮುಖರಾಗಲಿ ಎಂದು ಹಾರೈಸಿದೆ. ಹಾಗೆಯೇ ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಯಲಿ ಎಂದು ಹೇಳಿದೆ.

ಶುಕ್ರವಾರ ರಾಯಭಾರಿ ಕಚೇರಿ ಸಮೀಪದ ಕಟ್ಟಡದಿಂದ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಹಿರಿಯ ರಾಯಭಾರ ಅಧಿಕಾರಿ ಯಾವುದೇ ಅಪಾಯ ಇಲ್ಲದೆ ಪಾರಾಗಿದ್ದು, ಅವರ ಒಬ್ಬ ಕಾವಲುಗಾರ ಗಾಯಗೊಂಡಿದ್ದಾರೆ. ಇವರನ್ನು ತಾಯ್ನಾಡಿಗೆ ಕರೆತಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸರ್ಕಾರ ವಿರೋಧಿ ಪಡೆಗಳು ಈ ಭಯೋತ್ಪಾದಕ ಕೃತ್ಯ ಎಸಗಿವೆ ಎಂದು ಪಾಕಿಸ್ತಾನ ಆರೋಪಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು