ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹತ್ತು ಜನರಲ್ಲಿ ಒಬ್ಬರು ಕೊರೊನಾ ಸೋಂಕಿಗೆ ಒಳಗಾಗಿರಬಹುದು: ವಿಶ್ವ ಆರೋಗ್ಯ ಸಂಸ್ಥೆ

Last Updated 5 ಅಕ್ಟೋಬರ್ 2020, 13:39 IST
ಅಕ್ಷರ ಗಾತ್ರ

ಜಿನೀವಾ: ಜಗತ್ತಿನಾದ್ಯಂತ 10 ಜನರಲ್ಲಿ ಒಬ್ಬರು ಕೊರೊನಾ ವೈರಸ್‌ ಸೋಂಕಿಗೆ ಒಳಗಾಗಿರುವ ಸಾಧ್ಯತೆ ಇದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ಕೋವಿಡ್‌–19ಗೆ ಸಂಬಂಧಿಸಿದಂತೆ ಗಮನ ಹರಿಸಿರುವ ವಿಶ್ವ ಆರೋಗ್ಯ ಸಂಸ್ಥೆಯ 34 ಸದಸ್ಯರ ಕಾರ್ಯಕಾರಿ ಮಂಡಳಿಯು ಸೋಮವಾರ ಸಭೆ ನಡೆಸಿದೆ. 'ನಗರ ಮತ್ತು ಗ್ರಾಮೀಣ ಭಾಗಗಳು, ಸಮುದಾಯಗಳ ನಡುವೆ ಪ್ರಕರಣಗಳ ಸಂಖ್ಯೆಯಲ್ಲಿ ವ್ಯತ್ಯಾಸವಿದೆ. ಅಂದರೆ, ಜಗತ್ತಿನಲ್ಲಿ ಹೆಚ್ಚು ಜನರು ಅಪಾಯದ ಸ್ಥಿತಿಯಲ್ಲಿದ್ದಾರೆ' ಎಂದು ಡಬ್ಲ್ಯುಎಚ್‌ಒ ಆರೋಗ್ಯ ತುರ್ತು ಕಾರ್ಯಕ್ರಮಗಳ ಮುಖ್ಯಸ್ಥ ಡಾ.ಮೈಕೆಲ್‌ ರಯಾನ್‌ ಹೇಳಿದ್ದಾರೆ.

ಅಂದಾಜಿನ ಪ್ರಕಾರ, ಪ್ರಸ್ತುತ ಜಗತ್ತಿನ 760 ಕೋಟಿ ಜನಸಂಖ್ಯೆಯ ಆಧಾರದ ಮೇಲೆ 76 ಕೋಟಿಗೂ ಹೆಚ್ಚು ಜನರು ಕೊರೊನಾ ವೈರಸ್‌ ಸೋಂಕಿಗೆ ಒಳಗಾಗಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆ ಮತ್ತು ಜಾನ್ಸ್‌ ಹಾಪ್ಕಿನ್ಸ್ ಯೂನಿವರ್ಸಿಟಿಯ ಸಂಗ್ರಹಿಸುತ್ತಿರುವ ಕೋವಿಡ್‌ ದೃಢಪಟ್ಟ ಪ್ರಕರಣಗಳ ಲೆಕ್ಕಕ್ಕಿಂತಲೂ ಅಂದಾಜು ಪ್ರಕರಣಗಳ ಸಂಖ್ಯೆ ಅಧಿಕ.

ವರದಿಯಾಗುತ್ತಿರುವ ದೃಢಪಟ್ಟ ಪ್ರಕರಣಗಳಿಗೂ ವಾಸ್ತವದಲ್ಲಿ ಸೋಂಕಿನ ಪ್ರಮಾಣಕ್ಕೂ ಬಹಳ ವ್ಯತ್ಯಾಸವಿದ್ದು, ವಾಸ್ತವಕ್ಕಿಂತಲೂ ಕಡಿಮೆ ಅಂದಾಜಿಸಲಾಗಿದೆ ಎಂದು ತಜ್ಞರು ಹೇಳುತ್ತಲೇ ಬಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT