ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಡರ್ನಾ ಕೋವಿಡ್ ಲಸಿಕೆಯ ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆ ಅನುಮತಿ

Last Updated 1 ಮೇ 2021, 12:46 IST
ಅಕ್ಷರ ಗಾತ್ರ

ಜಿನಿವಾ: ಮಾಡರ್ನಾ ಕೋವಿಡ್ 19 ಲಸಿಕೆಯ ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆ ಹಸಿರು ನಿಶಾನೆ ತೋರಿದೆ.

ಅಮೆರಿಕದ ಕಂಪನಿ ತಯಾರಿಸುವ ಎಂಆರ್‌ಎನ್ಎ ಕೋವಿಡ್ ಲಸಿಕೆಯು ವಿಶ್ವ ಆರೋಗ್ಯ ಸಂಸ್ಥೆ ತುರ್ತು ಬಳಕೆಗೆ ಅನುಮೋದನೆ ನೀಡಿರುವ ಅಸ್ಟ್ರಾಜೆನೆಕಾ, ಫೈಜರ್-ಬಯೋಟೆಕ್ ಮತ್ತು ಜಾನ್ಸನ್ ಅಂಡ್ ಜಾನ್ಸನ್‌ ಲಸಿಕೆಗಳ ಪಟ್ಟಿಗೆ ಸೇರಿದೆ.

ಚೀನಾದ ಸಿನೋಫಾರ್ಮ್ ಮತ್ತು ಸಿನೋವಾಕ್ ಲಸಿಕೆಗಳಿಗೆ ಇದೇ ರೀತಿಯ ಅನುಮೋದನೆ ಮುಂಬರುವ ದಿನಗಳಲ್ಲಿ ನಿರೀಕ್ಷಿಸಬಹುದಾಗಿದೆ ಎಂದು ಡಬ್ಲ್ಯುಎಚ್‌ಒ ತಿಳಿಸಿದೆ.

ಉತ್ಪಾದಕರಿಂದ ಲಸಿಕೆಗೆ ಸಂಬಂಧಿಸಿದ ಡೇಟಾ ಪಡೆಯುವಲ್ಲಿ ಆದ ವಿಳಂಬದಿಂದಾಗಿ ಅನುಮೋದನೆಗೆ ವಿಶ್ವ ಆರೋಗ್ಯ ಸಂಸ್ಥೆ ಹಲವು ತಿಂಗಳುಗಳನ್ನು ತೆಗೆದುಕೊಂಡಿದೆ.

ತಮ್ಮದೇ ಆದ ಸುಧಾರಿತ ವೈದ್ಯಕೀಯ ನಿಯಂತ್ರಣ ಮತ್ತು ಮೌಲ್ಯಮಾಪನ ಕಚೇರಿಗಳಿಲ್ಲದ ಅನೇಕ ದೇಶಗಳು ಲಸಿಕೆಗಳನ್ನು ಬಳಸಬೇಕೆ ಎಂದು ನಿರ್ಧರಿಸಲು ವಿಶ್ವ ಆರೋಗ್ಯ ಸಂಸ್ಥೆ ಪಟ್ಟಿಯನ್ನು ಅವಲಂಬಿಸಿವೆ. ಸಾಂಕ್ರಾಮಿಕ ರೋಗದಂತಹ ತುರ್ತು ಪರಿಸ್ಥಿತಿಯಲ್ಲಿ ಲಸಿಕೆಗಳನ್ನು ಬಳಸಲು ವಿಶ್ವ ಸಂಸ್ಥೆಯ ಮಕ್ಕಳ ಘಟಕ ಯುನಿಸೆಫ್ ಸಹ ಪಟ್ಟಿಯನ್ನು ಬಳಸುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT