ಮಂಗಳವಾರ, ಅಕ್ಟೋಬರ್ 20, 2020
23 °C

ಕೋವಿಡ್ ಲಸಿಕೆ ಪೂರೈಕೆ ಭರವಸೆ: ಪ್ರಧಾನಿ ಮೋದಿ ಹೇಳಿಕೆಗೆ ಟೆಡ್ರೋಸ್‌ ಶ್ಲಾಘನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನ್ಯೂಯಾರ್ಕ್: ಕೋವಿಡ್‌–19 ಪಿಡುಗಿನ ವಿರುದ್ಧ ಹೋರಾಡುತ್ತಿರುವ ಇತರ ದೇಶಗಳಿಗೆ ಪೂರೈಕೆ ಮಾಡಲು ಭಾರತ ತನ್ನ ಲಸಿಕೆ ಉತ್ಪಾದನಾ ಸಾಮರ್ಥ್ಯವನ್ನು ಬಳಸಿಕೊಳ್ಳಲಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ ಟೆಡ್ರೋಸ್‌ ಅಧನಾಮ್‌ ಗೆಬ್ರೆಯೆಸಸ್‌ ಶ್ಲಾಘಿಸಿದ್ದಾರೆ.

ವಿಶ್ವ ಸಂಸ್ಥೆಯ 75ನೇ ಅಧಿವೇಶನವನ್ನು ಉದ್ಧೇಶಿಸಿ ಮಾತನಾಡುವಾಗ ಪ್ರಧಾನಿ ಮೋದಿ ಈ ಭರವಸೆ ನೀಡಿದ್ದರು.

‘ಪ್ರಧಾನಿ ಮೋದಿಯವರೇ ನಿಮಗೆ ಧನ್ಯವಾದ. ಸಾಮಾನ್ಯ ಉದ್ದೇಶಕ್ಕಾಗಿ ನಮ್ಮ ಸಂಪನ್ಮೂಲ, ಶಕ್ತಿಯನ್ನು ಒಟ್ಟುಗೂಡಿಸಿ ಮುನ್ನಡೆದಾಗ ಮಾತ್ರ ಕೋವಿಡ್‌ ವಿರುದ್ಧ ಜಯ ಸಾಧಿಸಲು ಸಾಧ್ಯ’ ಎಂದು ಗೆಬ್ರೆಯೆಸಸ್ ಟ್ವೀಟ್‌ ಮಾಡಿದ್ದಾರೆ.

 

 

‘ಬೃಹತ್‌ ಪ್ರಮಾಣದಲ್ಲಿ ಲಸಿಕೆ ಉತ್ಪಾದಿಸುವ ದೇಶಗಳಲ್ಲಿ ಭಾರತವೂ ಒಂದು. ಹೀಗಾಗಿ, ಭಾರತದಲ್ಲಿ ಉತ್ಪಾದಿಸಲಾಗುವ ಲಸಿಕೆಯನ್ನು ಇತರ ದೇಶಗಳಿಗೆ ಪೂರೈಕೆ ಮಾಡಲಾಗುವುದು. ಈ ಪಿಡುಗಿನ ವಿರುದ್ಧ ಹೋರಾಟ ನಡೆಸುತ್ತಿರುವ ದೇಶಗಳಿಗೆ ಮಾನವೀಯ ನೆಲೆಯಲ್ಲಿ ನೆರವು ನೀಡಲು ಸಿದ್ಧ’ ಎಂದು ಹೇಳಿದ್ದರು. 

 

‘ಇಂಥ ಸಂಕಷ್ಟ ಸಂದರ್ಭದಲ್ಲಿಯೂ ಭಾರತದ ಔಷಧಿ ಉತ್ಪಾದನಾ ಉದ್ದಿಮೆಗಳು 150ಕ್ಕೂ ಅಧಿಕ ದೇಶಗಳಿಗೆ ಅಗತ್ಯ ಔಷಧಿಗಳನ್ನು ರವಾನಿಸಿವೆ’ ಎಂದೂ ಹೇಳಿದ್ದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು