ಭಾನುವಾರ, ಮಾರ್ಚ್ 7, 2021
32 °C

ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಭಾರತದ ಪಾತ್ರವನ್ನು ಶ್ಲಾಘಿಸಿದ ವಿಶ್ವಸಂಸ್ಥೆ

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ವಿಶ್ವಸಂಸ್ಥೆ: ಕೋವಿಡ್‌ ವಿರುದ್ಧದ ಹೋರಾಟಕ್ಕೆ ಭಾರತವು 'ನಿರಂತರ ಬೆಂಬಲ' ನೀಡಿದ್ದಕ್ಕಾಗಿ ವಿಶ್ವ ಆರೋಗ್ಯ ಸಂಸ್ಥೆ ಧನ್ಯವಾದ ತಿಳಿಸಿದೆ.

ಈ ವಿಚಾರವಾಗಿ ಶನಿವಾರ ಟ್ವೀಟ್‌ ಮಾಡಿರುವ ಡಬ್ಲ್ಯುಎಚ್‌ಒ ಮುಖ್ಯಸ್ಥ ಟೆಡ್ರೋಸ್‌ ಅಡಾನೊಮ್ ಗೆಬ್ರೆಯೆಸಸ್, 'ಕೋವಿಡ್‌ ವಿರುದ್ಧದ ಜಾಗತಿಕ ಹೋರಾಟಕ್ಕೆ ನಿರಂತರ ಬೆಂಬಲ ನೀಡಿದ್ದಕ್ಕಾಗಿ ಭಾರತ ಮತ್ತು ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು. ನಾವು ಒಗ್ಗಟ್ಟಾಗಿ ಹೋರಾಟ ನಡೆಸಿದರೆ ಮಾತ್ರ ಈ ವೈರಸ್‌ನಿಂದ ಜೀವ ಮತ್ತು ಜೀವನಗಳನ್ನು ಉಳಿಸಬಹುದು' ಎಂದು ತಿಳಿಸಿದ್ದಾರೆ.

 

ಭಾರತವು ದಕ್ಷಿಣ ಏಷ್ಯಾದ ನೆರೆಹೊರೆಯ ದೇಶಗಳೂ ಸೇರಿದಂತೆ ಬ್ರೆಜಿಲ್ ಮತ್ತು ಮೊರಾಕೊದಂತಹ ದೇಶಗಳಿಗೆ ಲಸಿಕೆಗಳನ್ನು ಕಳುಹಿಸುತ್ತಿದೆ. ದಕ್ಷಿಣ ಆಫ್ರಿಕಾವೂ ಸಹ ಭಾರತದ ಲಸಿಕೆಯನ್ನು ಶೀಘ್ರದಲ್ಲಿಯೇ ಪಡೆಯಲಿದೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು