ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

5 ವಾರಗಳ ಬಳಿಕ ಕೋವಿಡ್‌ ಸಾವಿನ ಸಂಖ್ಯೆಯಲ್ಲಿ ಹೆಚ್ಚಳ: ವಿಶ್ವ ಆರೋಗ್ಯ ಸಂಸ್ಥೆ

Last Updated 16 ಜೂನ್ 2022, 14:06 IST
ಅಕ್ಷರ ಗಾತ್ರ

ಜಿನೇವಾ: ಜಗತ್ತಿನಲ್ಲಿ ಕಳೆದ ಐದು ವಾರಗಳಿಂದ ಇಳಿಕೆಯಾಗಿದ್ದ ಕೋವಿಡ್‌ ಸಾವಿನ ಪ್ರಮಾಣ ಇದೀಗ ಮತ್ತೆ ಏರಿಕೆಯಾಗಿದೆ, ಅದರ ಪ್ರಮಾಣ ಶೇ 4ರಷ್ಟಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ತಿಳಿಸಿದೆ.

‘ಕಳೆದ ವಾರ 8,700 ಕೋವಿಡ್‌ ಸೋಂಕಿತರು ಸಾವಿಗೀಡಾಗಿದ್ದಾರೆ. ಸಾವಿನ ಪ್ರಮಾಣವು ಅಮೆರಿಕದಲ್ಲಿ ಶೇಕಡ 21ರಷ್ಟು ಹಾಗೂ ಪಶ್ಚಿಮ ಪೆಸಿಫಿಕ್‌ನಲ್ಲಿ ಶೇಕಡ 17ರಷ್ಟು ಹೆಚ್ಚಳವಾಗಿದೆ’ ಎಂದುಡಬ್ಲ್ಯುಎಚ್ಒದ ವಾರದ ವರದಿಯಲ್ಲಿ ತಿಳಿಸಲಾಗಿದೆ.

‘ಕಳೆದ ವಾರ ಸುಮಾರು 32 ಲಕ್ಷ ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದವು. ಜನವರಿಯಲ್ಲಿ ಗರಿಷ್ಠ ಮಟ್ಟದಲ್ಲಿದ್ದ ಸಾವಿನ ಪ್ರಮಾಣವು ನಿರಂತರವಾಗಿ ಕುಸಿಯುತ್ತಾ ಬಂದಿತ್ತು. ಮಧ್ಯಪ್ರಾಚ್ಯ ಮತ್ತು ಆಗ್ನೇಯ ಏಷ್ಯಾದಲ್ಲಿ ಕ್ರಮವಾಗಿ ಶೇ 58ರಷ್ಟು ಮತ್ತು ಶೇ 33ರಷ್ಟು ಕೋವಿಡ್‌ ಪ್ರಕರಣಗಳು ಏರಿಕೆಯಾಗಿವೆ’ ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT