ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಸಾವಿನ ಸಂಖ್ಯೆ ಶೇ 40ರಷ್ಟು ಹೆಚ್ಚಳ, ಪ್ರಕರಣಗಳು ಇಳಿಮುಖ : ಡಬ್ಲ್ಯುಎಚ್‌ಒ

Last Updated 30 ಮಾರ್ಚ್ 2022, 13:13 IST
ಅಕ್ಷರ ಗಾತ್ರ

ಜಿನಿವಾ: ಕಳೆದ ವಾರವೊಂದರಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಪ್ರಮಾಣ ಶೇ 40ಕ್ಕಿಂತ ಹೆಚ್ಚಾಗಿದೆ. ಆದರೆ, ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ಅಮೆರಿಕದಲ್ಲಿ ಕೋವಿಡ್‌ಗೆ ಬಲಿಯಾದವರ ಸಂಖ್ಯೆಯಲ್ಲಿ ಬದಲಾವಣೆ ಮತ್ತು ಭಾರತದಲ್ಲಿ ಸಾವಿಗೀಡಾದವರ ಸಂಖ್ಯೆಯ ಪರಿಷ್ಕರಣೆಯಿಂದಾಗಿ ಸಾವಿನ ಪ್ರಮಾಣ ಹೆಚ್ಚಾಗಿರಬಹುದು ಎಂದು ಹೇಳಲಾಗಿದೆ.

ಕೊರೊನಾ ಕುರಿತ ವಾರದ ವರದಿಯಲ್ಲಿ ವಿಶ್ವದಾದ್ಯಂತ ಸೋಂಕಿನ ಪ್ರಕರಣಗಳು ಗಣನೀಯವಾಗಿ ಇಳಿಕೆಯಾಗಿದೆ. ಕಳೆದ ವಾರದಲ್ಲಿ 1 ಕೋಟಿ ಮಂದಿಗೆ ಸೋಂಕು ವ್ಯಾಪಿಸಿದ್ದು, 45,000ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಇದಕ್ಕೂ ಮುಂಚಿನ ವಾರದಲ್ಲಿ ಕೋವಿಡ್ ಸಾವಿನ ಪ್ರಮಾಣ ಶೇ 23ರಷ್ಟು ಕುಸಿದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT