ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವ್ಯಾಕ್ಸಿನ್‌ ಲಸಿಕೆಯ ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆ ಅನುಮತಿ

Last Updated 3 ನವೆಂಬರ್ 2021, 13:04 IST
ಅಕ್ಷರ ಗಾತ್ರ

ವಾಷಿಂಗ್ಟನ್: ಭಾರತದ ಭಾರತ್ ಬಯೋಟೆಕ್ ಕಂಪನಿ ಅಭಿವೃದ್ಧಿಪಡಿಸಿರುವ ಕೋವಿಡ್–19 ಲಸಿಕೆ ಕೋವ್ಯಾಕ್ಸಿನ್‌ ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಅನುಮತಿ ನೀಡಿದೆ ಎಂದು ವರದಿಯಾಗಿದೆ.

ತುರ್ತು ಬಳಕೆ ಲಸಿಕೆಗಳ ಪಟ್ಟಿಯಲ್ಲಿ ಕೋವ್ಯಾಕ್ಸಿನ್‌ ಸೇರ್ಪಡೆಗೆ ಡಬ್ಲ್ಯುಎಚ್‌ಒದ ತಾಂತ್ರಿಕ ಸಲಹಾ ಸಮಿತಿ ಅನುಮೋದನೆ ನೀಡಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ಪಿಟಿಐ’ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.

ಇದರೊಂದಿಗೆ ಭಾರತದಲ್ಲಿ ಅಭಿವೃದ್ಧಿಪಡಿಸಲಾದ ಕೋವಿಡ್ ಲಸಿಕೆಗೆ ಜಾಗತಿಕ ಮಾನ್ಯತೆ ದೊರೆತಂತಾಗಿದೆ.

ತುರ್ತು ಬಳಕೆಯ ಕೋವಿಡ್ ಲಸಿಕೆಗಳ ಪಟ್ಟಿಗೆ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ಕೋವ್ಯಾಕ್ಸಿನ್‌ ಅನ್ನೂ ಸೇರ್ಪಡೆಗೊಳಿಸಲಾಗಿದೆ. ಕೋವಿಡ್–19 ಪ್ರಸರಣ ತಡೆಯುವ ನಿಟ್ಟಿನಲ್ಲಿ ಅಭಿವೃದ್ಧಿಪಡಿಸಲಾಗಿರುವ, ಅನುಮೋದಿತ ಲಸಿಕೆಗಳ ಪಟ್ಟಿ ಬೆಳೆಯುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಟ್ವೀಟ್ ಮಾಡಿದೆ.

ಭಾರತದ ಕೋವಿಡ್‌ ಲಸಿಕೆಯ ಬಗ್ಗೆ ವಿಶ್ವಾಸವಿದೆ. ಭಾರತ್ ಬಯೋಟೆಕ್ ಕಂಪನಿಯು ನಿಯಮಿತವಾಗಿ ಮತ್ತು ತ್ವರಿತವಾಗಿ ಮಾಹಿತಿಗಳನ್ನು ಸಲ್ಲಿಸುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಇತ್ತೀಚೆಗೆ ಹೇಳಿತ್ತು. ಒಮನ್‌ ಕೂಡ ಕೋವ್ಯಾಕ್ಸಿನ್‌ ಅನ್ನು ಅನುಮೋದಿತ ಕೋವಿಡ್‌–19 ಲಸಿಕೆಗಳ ಪಟ್ಟಿಗೆ ಸೇರಿಸಿತ್ತು.

ಐಸಿಎಂಆರ್‌, ಭಾರತ್ ಬಯೋಟೆಕ್ವಿಜ್ಞಾನಿಗಳಿಗೆ ಅಭಿನಂದನೆ

ಕೋವ್ಯಾಕ್ಸಿನ್‌ ಲಸಿಕೆಗೆ ಜಾಗತಿಕ ಮನ್ನಣೆ ದೊರೆತ ಬೆನ್ನಲ್ಲೇ ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವೀಯ ಅವರು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮತ್ತು ಭಾರತ್ ಬಯೋಟೆಕ್ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.ಐಸಿಎಂಆರ್ ಹಾಗೂಭಾರತ್ ಬಯೋಟೆಕ್ ಜಂಟಿಯಾಗಿಕೋವ್ಯಾಕ್ಸಿನ್‌ ಅಭಿವೃದ್ಧಿಪಡಿಸಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT