ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವ್ಯಾಕ್ಸಿನ್‌: ತುರ್ತು ಬಳಕೆಗೆ ಡಬ್ಲ್ಯೂಎಚ್‌ಒ ಒಪ್ಪಿಗೆ ನೀಡುವ ಸಾಧ್ಯತೆ

Last Updated 18 ಅಕ್ಟೋಬರ್ 2021, 8:31 IST
ಅಕ್ಷರ ಗಾತ್ರ

ವಿಶ್ವಸಂಸ್ಥೆ/ಜಿನೀವಾ (ಪಿಟಿಐ): ಭಾರತದ ಕೋವ್ಯಾಕ್ಸಿನ್‌ ಲಸಿಕೆಯನ್ನು ತುರ್ತು ಬಳಕೆಯ ಪಟ್ಟಿಯಲ್ಲಿ ಪರಿಗಣಿಸಲು ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯೂಎಚ್‌ಒ) ತಾಂತ್ರಿಕ ಸಲಹಾ ಗುಂಪು ಅಕ್ಟೋಬರ್‌ 26 ರಂದು ಸಭೆ ಸೇರಲಿದೆ ಎಂದು ಜಾಗತಿಕ ಆರೋಗ್ಯ ಸಂಸ್ಥೆಯ ಮುಖ್ಯ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್‌ ಹೇಳಿದ್ದಾರೆ.

ಕೋವ್ಯಾಕ್ಸಿನ್‌ ಅನ್ನು ಭಾರತದಲ್ಲಿ ಕೋವಿಡ್ ಲಸಿಕಾ ಕಾರ್ಯಕ್ರಮದಡಿ ಬಳಸಲಾಗುತ್ತಿದೆ.

ಕೋವ್ಯಾಕ್ಸಿನ್‌ ಅಭಿವೃದ್ಧಿಪಡಿಸಿರುವ ಹೈದರಾಬಾದ್‌ ಮೂಲದ ಭಾರತ ಬಯೋಟೆಕ್‌ ಸಂಸ್ಥೆಯು ಲಸಿಕೆಯ ಬಳಕೆಗಾಗಿ ಕಳೆದ ಏಪ್ರಿಲ್‌ 19 ರಂದು ವಿಶ್ವ ಆರೋಗ್ಯ ಸಂಸ್ಥೆಗೆ ಪ್ರಸ್ತಾವನೆ ಸಲ್ಲಿಸಿತ್ತು.

ತಾಂತ್ರಿಕ ಸಲಹಾ ಗುಂಪು ಅಕ್ಟೋಬರ್‌ 26ರಂದು ಸಭೆ ಸೇರಲಿದೆ. ಕೋವ್ಯಾಕ್ಸಿನ್‌ ಅನ್ನು ತುರ್ತು ಬಳಕೆಯ ಪಟ್ಟಿಯಲ್ಲಿ ಪರಿಗಣಿಸುವ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಡಬ್ಲ್ಯೂಎಚ್ಒನ ಮುಖ್ಯ ವಿಜ್ಞಾನಿ ಸ್ವಾಮಿನಾಥನ್‌ ಭಾನುವಾರ ಟ್ವೀಟ್‌ ಮಾಡಿದ್ದಾರೆ.

‘ಭಾರತ ಬಯೋಟೆಕ್‌ ಜೊತೆ ವಿಶ್ವ ಆರೋಗ್ಯ ಸಂಸ್ಥೆಯು ನಿಕಟವಾಗಿ ಕಾರ್ಯನಿರ್ವಹಿಸುತ್ತಿದೆ. ತುರ್ತು ಬಳಕೆಗಾಗಿ ವ್ಯಾಪಕವಾಗಿ ಲಸಿಕೆಗಳನ್ನು ಅನುಮೋದಿಸುವುದು ಮತ್ತು ಎಲ್ಲಾ ಜನರಿಗೆ ತಲುಪುವಂತೆ ಮಾಡುವುದು ನಮ್ಮ ಗುರಿಯಾಗಿದೆ’ ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT