ಸೋಮವಾರ, ಜುಲೈ 4, 2022
22 °C

ಮುಂದಿನ ವಾರ ನಾವು ಬಹುಮತ ತೋರಿಸುತ್ತೇವೆ- ಗೋಟಬಯ ಸರ್ಕಾರಕ್ಕೆ ಪ್ರತಿಪಕ್ಷ ಸವಾಲು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೊಲಂಬೊ: ರಾಜಪಕ್ಸ ಕುಟುಂಬ ಮುನ್ನಡೆಸುತ್ತಿರುವ ಸರ್ಕಾರದ ವಿರುದ್ಧ ಮುಂದಿನ ವಾರ ಅವಿಶ್ವಾಸ ನಿರ್ಣಯ ಮಂಡಿಸಲಿದ್ದು, ನಮಗೆ ಬಹುಮತ ಇದೆ ಎಂಬುದನ್ನು ಸಾಬೀತುಪಡಿಸಲಿದ್ದೇವೆ ಎಂಬುದಾಗಿ ವಿರೋಧ ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. 

ವಿದೇಶಿ ವಿನಿಮಯದ ಕೊರತೆಯಿಂದಾಗಿ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಸರ್ಕಾರವನ್ನು ಅಸ್ಥಿರಗೊಳಿಸಿ, ಹೊಸ ಸರ್ಕಾರ ರಚನೆಗೆ ಬಯಸುವವರು, ಅದಕ್ಕೆ ಅಗತ್ಯವಿರುವ 113 ಸಂಸದರ ಬೆಂಬಲವನ್ನು ತೋರಿಸಬೇಕು ಎಂದು ಅಧ್ಯಕ್ಷ ಗೋಟಬಯ ರಾಜಪಕ್ಸ ಅವರು ಪ್ರತಿಪಕ್ಷಗಳಿಗೆ ಸವಾಲು ಹಾಕಿದ್ದರು.

ಇದರ ಬೆನ್ನಲ್ಲೇ, ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿರುವ ವಿರೋಧ ಪಕ್ಷದ ಮುಖ್ಯ ಸಚೇತಕ ಲಕ್ಷ್ಮಣ್ ಕಿರೀಲ್ಲಾ, 'ಮುಂದಿನ ವಾರ ನಾವು ಬಹುಮತ ತೋರಿಸುತ್ತೇವೆ. ಆದರೆ, ನಾವು ಬಹುಮತವನ್ನು ಹೇಗೆ ಸಾಬೀತುಪಡಿಸುತ್ತೇವೆ ಎಂಬುದನ್ನು ಈಗಲೇ ಬಹಿರಂಗಪಡಿಸುವುದಿಲ್ಲ ಎಂದರು.

ಅಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು' ಎಂದು ಅವರು ಇದೇ ಸಂದರ್ಭದಲ್ಲಿ ಒತ್ತಾಯಿಸಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು