ಬುಧವಾರ, ಅಕ್ಟೋಬರ್ 21, 2020
26 °C
ಡೆಮಾಕ್ರಟಿಕ್‌ ಪಕ್ಷದ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಜೊ ಬೈಡನ್

ಅಮೆರಿಕ ಚುನಾವಣೆ: 1.1 ಕೋಟಿ ವಲಸಿಗರಿಗೆ ಪೌರತ್ವ ನೀಡುವ ಭರವಸೆ

ಪಿಟಿಐ Updated:

ಅಕ್ಷರ ಗಾತ್ರ : | |

ಜೊ ಬೈಡೆನ್

ವಾಷಿಂಗ್ಟನ್‌: ‘ಮುಂದಿನ ತಿಂಗಳು ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ, ದೇಶದಲ್ಲಿರುವ 1‌.1 ಕೋಟಿಯಷ್ಟು ಅಕ್ರಮ ವಲಸಿಗರಿಗೆ ಅಮೆರಿಕದ ಪೌರತ್ವ ನೀಡುವುದಾಗಿ’ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಸ್ಥಾನದ ಅಭ್ಯರ್ಥಿ ಜೊ ಬೈಡನ್ ಭರವಸೆ ನೀಡಿದ್ದಾರೆ.

ಕೊರೊನಾ ವೈರಸ್‌ ವಿರುದ್ಧದ ಹೋರಾಟದ ಜತೆಗೆ, ಅಕ್ರಮ ವಲಸಿಗರಿಗೆ ಪೌರತ್ವ ನೀಡುವುದನ್ನು ತಮ್ಮ ಆದ್ಯತಾ ಕೆಲಸವೆಂದು ಗುರುತಿಸಿದ್ದಾರೆ ಬೈಡನ್. ಇದೇ ವೇಳೆ, ಕುಸಿದಿರುವ ಅಮೆರಿಕದ ಆರ್ಥಿಕತೆಗೆ ಚೈತನ್ಯ ನೀಡಿ, ವಿಶ್ವದ ವಿವಿಧ ಭಾಗಗಳಲ್ಲಿ ಅಮೆರಿಕದ ನಾಯಕತ್ವವನ್ನು ಮರುಸ್ಥಾಪಿಸುವ ಬಗ್ಗೆಯೂ ಬೈಡನ್ ಯೋಜನೆ ಹಾಕಿಕೊಂಡಿದ್ದಾರೆ.

ವರ್ಚುವಲ್‌ ದೇಣಿಗೆ ಸಂಗ್ರಹ ಕುರಿತ ಪ್ರಶ್ನೆಗೆ ಉತ್ತರಿಸಿದ ಬೈಡನ್‌, ‘ಗಡಿಭಾಗದಲ್ಲಿ ನಡೆಯುತ್ತಿರುವ ಚಟುವಟಿಕೆಗಳಿಗೆ ಪ್ರತಿಕ್ರಿಯೆ ನೀಡಲು ಅದು ಅವಶ್ಯಕತೆ ಇದೆ’ ಎಂದಿದ್ದಾರೆ. 

‘ನಾವೀಗ ವಲಸೆ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸಬೇಕಿದೆ. ಈ ಹಿನ್ನೆಲೆಯಲ್ಲಿ ನಾನು ಆಯ್ಕೆಯಾದರೆ 1.1 ಕೋಟಿ ವಲಸಿಗರಿಗೆ ಪೌರತ್ವ ನೀಡುವಂತಹ ವಲಸೆ ಮಸೂದೆಯನ್ನು ಜನಪ್ರತಿನಿಧಿಗಳ ಸಭೆ ಮತ್ತು ಸೆನೆಟ್ ಎರಡೂ ಕಡೆಯಲ್ಲೂ ಮಂಡಿಸಲು ಅನುವು ಮಾಡಿಕೊಡುತ್ತೇನೆ’ ಎಂದು ಭರವಸೆ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು