ಬುಧವಾರ, ಮಾರ್ಚ್ 29, 2023
32 °C

ಪಾಕಿಸ್ತಾನಕ್ಕೆ ಅತ್ಯಾಧುನಿಕ ಯುದ್ಧನೌಕೆ ನೀಡಿದ ಚೀನಾ

ಪಿಟಿಐ Updated:

ಅಕ್ಷರ ಗಾತ್ರ : | |

ಬೀಜಿಂಗ್‌: ಚೀನಾ ಅತಿದೊಡ್ಡ ಮತ್ತು ಅತ್ಯಾಧುನಿಕ ಯುದ್ಧನೌಕೆಯನ್ನು ಪಾಕಿಸ್ತಾನಕ್ಕೆ ನೀಡಿದ್ದು ಇದರಿಂದಾಗಿ ಅರಬ್ಬಿ ಸಮುದ್ರ ಮತ್ತು ಹಿಂದೂ ಮಹಾಸಾಗರದಲ್ಲಿ ಕಣ್ಣಿಡಲು ನೌಕಾಪಡೆಗೆ ಹೆಚ್ಚಿನ ಅನುಕೂಲವಾಗಲಿದೆ. 

ಚೀನಾ ಸ್ಟೇಟ್ ಶಿಪ್ ಬಿಲ್ಡಿಂಗ್ ಕಾರ್ಪೊರೇಷನ್ ಲಿಮಿಟೆಡ್ (ಸಿಎಸ್‌ಎಸ್‌ಸಿ) ಈ ಯುದ್ಧನೌಕೆಯನ್ನು ವಿನ್ಯಾಸಗೊಳಿಸಿದೆ. ಇದನ್ನು ಶಾಂಘೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಕಿಸ್ತಾನದ ನೌಕಾಪಡೆಗೆ ಹಸ್ತಾಂತರಿಸಲಾಯಿತು ಎಂದು ಹೇಳಿಕೆಯೊಂದರಲ್ಲಿ ತಿಳಿಸಲಾಗಿದೆ.

ಈ ಯುದ್ಧನೌಕೆಗೆ ಪಿಎನ್‌ಎಸ್‌ ತುಘ್ರಿಲ್‌ ಎಂದು ಹೆಸರಿಡಲಾಗಿದೆ ಎಂದು ‘ಗ್ಲೋಬಲ್‌ ಟೈಮ್ಸ್‌’ ಮಂಗಳವಾರ ವರದಿ ಮಾಡಿದೆ. 

ಸಮುದ್ರ ಪ್ರದೇಶದಲ್ಲಿನ ಭದ್ರತೆಯನ್ನು ಖಚಿತಪಡಿಸಲು, ಸಮುದ್ರದಲ್ಲಿನ ಸವಾಲುಗಳನ್ನು ಎದುರಿಸಲು ತುಘ್ರಿಲ್‌ ಸಹಾಯಕವಾಗಿದ್ದು ಪಾಕಿಸ್ತಾನದ ನೌಕಾಪಡೆಯ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಹಿಂದೂ ಮಹಾಸಾಗರ ಪ್ರದೇಶದಲ್ಲಿ ಶಾಂತಿ ಸೌಹಾರ್ದತೆ ಕಾಪಾಡಲು ಸಹಕಾರಿಯಾಗಲಿದೆ ಎಂದು ಚೀನಾದಲ್ಲಿ ಪಾಕಿಸ್ತಾನದ ರಾಯಭಾರಿಯಾಗಿರುವ ಮೊಯಿನ್ ಉಲ್‌ ಹಕ್‌ ಹೇಳಿರುವುದಾಗಿ ಗ್ಲೋಬಲ್‌ ಟೈಮ್ಸ್‌ ವರದಿ ಮಾಡಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು