ಗುರುವಾರ , ಆಗಸ್ಟ್ 11, 2022
24 °C

ಕೋವಿಡ್‌ ಕುರಿತು ವಿಶ್ವಸಂಸ್ಥೆ ವಿಶೇಷ ಅಧಿವೇಶನದಲ್ಲಿ ಚರ್ಚೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಿಶ್ವಸಂಸ್ಥೆ: ಈ ವಾರ ಕೋವಿಡ್‌ ಕುರಿತಾಗಿ ನಡೆಯಲಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ವಿಶೇಷ ಅಧಿವೇಶನದಲ್ಲಿ ವಿಶ್ವ ನಾಯಕರು, ವಿಶ್ವಸಂಸ್ಥೆಯ ಉನ್ನತ ನಾಯಕರು ಮತ್ತು ಲಸಿಕೆ ಅಭಿವೃದ್ಧಿಪಡಿಸಿದ ತಜ್ಞರು ಮಾತನಾಡಲಿದ್ದಾರೆ.

ವಿಶ್ವಸಂಸ್ಥೆಯ ಮುಖ್ಯಕಚೇರಿಯಲ್ಲಿ ಡಿಸೆಂಬರ್‌ 3 ಮತ್ತು 4 ರಂದು ಸಾಮಾನ್ಯ ಸಭೆಯ ವಿಶೇಷ ಅಧಿವೇಶನ ನಡೆಯಲಿದೆ.

ಸೀರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆದರ್ ಪೂನವಾಲಾ ಅವರು ಕೂಡ ಅಧಿವೇಶನದಲ್ಲಿ ಭಾಗಿಯಾಗಲಿದ್ದು, ಡಿಸೆಂಬರ್‌ 4ರಂದು  ಅವರ ಭಾಷಣದ ವಿಡಿಯೊವನ್ನು ಪ್ರಸಾರ ಮಾಡಲಾಗುತ್ತದೆ.

ಅಫ್ಗಾನಿಸ್ತಾನದ ಅಧ್ಯಕ್ಷ ಅಶ್ರಫ್ ಘನಿ, ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುವೆಲ್‌ ಮ್ಯಾಕ್ರನ್‌, ನೇಪಾಳದ ಪ್ರಧಾನಿ ಕೆ.ಪಿ.ಶರ್ಮಾ ಒಲಿ, ನ್ಯೂಜಿಲೆಂಡ್‌ ಪ್ರಧಾನಿ ಜಸಿಂದಾ ಆರ್ಡೆರ್ನ್‌, ಜರ್ಮನ್‌ ಚಾನ್ಸೆಲರ್‌ ಏಂಜೆಲಾ ಮರ್ಕೆಲ್‌ ಅವರು ಕೂಡ ಅಧಿವೇಶನದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು