ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿ20 ಶೃಂಗಸಭೆಯಲ್ಲಿ ಜಾಗತಿಕ ನಾಯಕರ ಸಮಾಗಮ

Last Updated 14 ನವೆಂಬರ್ 2022, 11:01 IST
ಅಕ್ಷರ ಗಾತ್ರ

ಬಾಲಿ (ಪಿಟಿಐ):ಇಂಡೊನೇಷ್ಯಾದ ಬಾಲಿಯಲ್ಲಿ ನವೆಂಬರ್‌ 15 ಮತ್ತು 16ರಂದು ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಭಾರತ, ಅಮೆರಿಕ, ಚೀನಾ, ಬ್ರಿಟನ್‌ ಸೇರಿದಂತೆ ಹಲವು ದೇಶಗಳ ನಾಯಕರು ಭಾಗಿಯಾಲಿದ್ದಾರೆ.

ಭಾರತ ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಜೋ ಬೈಡೆನ್‌, ಬ್ರಿಟನ್‌ ನೂತನ ಪ್ರಧಾನಿ ರಿಷಿ ಸುನಕ್‌, ಚೀನಾ ಅಧ್ಯಕ್ಷ ಷಿ–ಜಿನ್‌ಪಿಂಗ್‌ ಸೇರಿ ಅನೇಕ ಜಾಗತಿಕ ನಾಯಕರು ಭಾಗಿಯಾಗಲಿದ್ದಾರೆ.ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ತಮ್ಮ ಬದಲಾಗಿ ವಿದೇಶಾಂಗ ಸಚಿವ ಸೆರ್ಗಿ ಲಾವ್ರೊವ್‌ ಅವರನ್ನು ಶೃಂಗಸಭೆಗೆ ಕಳುಹಿಸುತ್ತಿದ್ದಾರೆ. ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್‌ ಸ್ಕಿ ಅವರು ವರ್ಚುವಲ್ ಆಗಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಪ್ರಧಾನಿ ಮೋದಿ ಅವರುಶೃಂಗಸಭೆಯಲ್ಲಿ ಪಾಲ್ಗೊಳ್ಳುವ ಜೊತೆಗೆ, ಕೆಲವು ದೇಶಗಳ ನಾಯಕರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ. ಆದರೆ ಮೋದಿ ಮತ್ತು ಚೀನಾ ಅಧ್ಯಕ್ಷ ಷಿ–ಜಿನ್‌ಪಿಂಗ್‌ ಅವರೊಂದಿಗೆ ಪ್ರತ್ಯೇಕ ಸಭೆ ನಡೆಯಲಿದೆಯೇ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಒಂದು ವೇಳೆ ಉಭಯ ದೇಶಗಳ ನಾಯಕರೊಂದಿಗೆ ಸಭೆ ನಡೆದಲ್ಲಿ 2020 ಗಾಲ್ವಾನ್ ಕಣಿವೆ ಸಂಘರ್ಷದ ನಂತರ ನಡೆಯುವ ಮೊದಲ ಸಭೆ ಇದಾಗಿರಲಿದೆ.

ಸದ್ಯ ಇಂಡೊನೇಷ್ಯಾ ಜಿ20 ಗುಂಪಿನ ಅಧ್ಯಕ್ಷತೆ ಹೊಂದಿದೆ.ಡಿಸೆಂಬರ್‌ 1ರಂದುಭಾರತವು ಜಿ–20 ಗುಂಪಿನ ಅಧ್ಯಕ್ಷತೆ ವಹಿಸಿಕೊಳ್ಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT