ಭಾನುವಾರ, ಫೆಬ್ರವರಿ 28, 2021
20 °C

ಚೀನಾ: ಸಹಜ ಸ್ಥಿತಿಗೆ ವುಹಾನ್‌ ನಗರ

ಎಪಿ Updated:

ಅಕ್ಷರ ಗಾತ್ರ : | |

Prajavani

ವುಹಾನ್‌: ಕೊರೊನಾ ವೈರಸ್‌ ಮೊದಲು ಪತ್ತೆಯಾಗಿದ್ದ ಚೀನಾದ ವುಹಾನ್‌ ನಗರದಲ್ಲಿ ಈಗ ಜನಜೀವನ ಸಹಜ ಸ್ಥಿತಿಗೆ ಬಂದಿದೆ.

ಕಳೆದ ಒಂದು ವರ್ಷದ ಹಿಂದೆ ಸರಿಯಾಗಿ ಚೀನಾದ ವುಹಾನ್‌ ನಗರದಲ್ಲಿ ಕೊರೊನಾ ವೈರಸ್‌ ನಿಯಂತ್ರಿಸಲು 76 ದಿನಗಳ ಲಾಕ್‌ಡೌನ್‌ ಜಾರಿಗೊಳಿಸಲಾಗಿತ್ತು.

1.1 ಕೋಟಿ ಜನರಿರುವ ವುಹಾನ್‌ ನಗರದಲ್ಲಿ ವೈರಸ್‌ ಸೋಂಕಿನಿಂದ 4,635 ಮಂದಿ ಸಾವಿಗೀಡಾಗಿದ್ದಾರೆ. ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಸಾವಿನ ಪ್ರಮಾಣ ಅತಿ ಕಡಿಮೆಯಾಗಿದೆ.

ಆದರೆ, ವೈರಸ್‌ ಎಲ್ಲಿ ಸೃಷ್ಟಿಯಾಯಿತು ಮತ್ತು ಚೀನಾದ ಅಧಿಕಾರಿಗಳು ತ್ವರಿತಗತಿಯಲ್ಲಿ ನಿಯಂತ್ರಣಕ್ಕೆ ಕ್ರಮಗಳನ್ನು ಕೈಗೊಳ್ಳಲಿಲ್ಲ ಏಕೆ ಎನ್ನುವ ಪ್ರಶ್ನೆಗಳಿಗೆ ಇನ್ನೂ ಉತ್ತರ ದೊರೆತಿಲ್ಲ.

ಚೀನಾದಲ್ಲಿ ಕೋವಿಡ್‌–19 ಲಸಿಕೆ ಹಾಕುವ ಪ್ರಕ್ರಿಯೆ ಆರಂಭವಾಗಿದೆ. ಆದರೆ, ಲಸಿಕೆ ಪೂರೈಕೆಯಲ್ಲಿ ಕೊರತೆಯಾಗಿರುವುದರಿಂದ ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಚೀನಾದಲ್ಲಿ ಮುಂದಿನ ತಿಂಗಳಿನಿಂದ ಚಂದ್ರಮಾನದ ಹೊಸ ವರ್ಷದ ರಜೆ ಆರಂಭವಾಗಲಿದೆ. ಆದರೆ, ಈ ರಜೆ ದಿನಗಳಲ್ಲಿ ಸಂಚಾರ ಕೈಗೊಳ್ಳದಂತೆ ಸರ್ಕಾರ ಜನರಿಗೆ ಎಚ್ಚರಿಕೆ ನೀಡಿದೆ. ಜತೆಗೆ ಗುಂಪುಗೂಡಬಾರದು ಮತ್ತು ಸಾಮೂಹಿಕ ಕಾರ್ಯಕ್ರಮಗಳನ್ನು ಮಾಡಬಾರದು ಎಂದು ಸರ್ಕಾರ ಸೂಚನೆ ನೀಡಿದೆ. ಕೊರೊನಾ ವೈರಸ್‌ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ ಎನ್ನುವ ಕಾರಣಕ್ಕೆ ಸರ್ಕಾರ ಈ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುತ್ತಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು