ಬುಧವಾರ, ನವೆಂಬರ್ 25, 2020
19 °C

ಅಮೆರಿಕಕ್ಕೆ ಹೊಸ ದಿನ: ಕಮಲಾ ಹ್ಯಾರಿಸ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಾಷಿಂಗ್ಟನ್‌: ಅಧ್ಯಕ್ಷರಾಗಿ ಜೋ ಬೈಡನ್‌ ಅವರನ್ನು ಆಯ್ಕೆ ಮಾಡುವ ಮೂಲಕ ಅಮೆರಿಕನ್ನರು ಈ ರಾಷ್ಟ್ರಕ್ಕೆ ಹೊಸ ಕನಸಿನ, ಹೊಸ ದಿನದ ಭರವಸೆ ಮೂಡಿಸಿದ್ದಾರೆ ಎಂದು ಉಪಾಧ್ಯಕ್ಷೆಯಾಗಿ ಆಯ್ಕೆಯಾದ ಕಮಲಾ ಹ್ಯಾರಿಸ್‌ ಶನಿವಾರ ರಾತ್ರಿ ಬಣ್ಣಿಸಿದ್ದಾರೆ.

ಚುನಾವಣೆಯಲ್ಲಿ ಅಮೆರಿಕದ ಅಧ್ಯಕ್ಷರಾಗಿ ಬೈಡನ್‌ ಮತ್ತು ಉಪಾಧ್ಯಕ್ಷೆಯಾಗಿ ತಮ್ಮ  ಆಯ್ಕೆ ಬಳಿಕ ಮಾತನಾಡಿದ ಅವರು, ಮುಂದಿನ ನಾಲ್ಕು ವರ್ಷಗಳಿಗೆ ಮತದಾರರು ತಮ್ಮ ನಿರ್ಣಯ ನೀಡಿದ್ದಾರೆ. ಈಗ ನಿಜವಾಗಿ ಅಭಿವೃದ್ಧಿಯ ಕೆಲಸಗಳು ಶುರುವಾಗಲಿವೆ ಎಂದು ಹೇಳಿದ್ದಾರೆ.

ಗೆಲುವಿನ ಸಂದರ್ಭದಲ್ಲಿ ಅವರು ತಮ್ಮ ತಾಯಿ ಶ್ಯಾಮಲಾ ಗೋಪಾಲನ್‌ ಅವರನ್ನೂ ನೆನೆಪಿಸಿಕೊಂಡಿದ್ದಾರೆ.

‘ಪ್ರತಿ ದಿನವೂ ನಿಮ್ಮನ್ನು ಮತ್ತು ನಿಮ್ಮ ಕುಟುಂಬದವರನ್ನು ಆಲೋಚನೆಯಲ್ಲಿ ಇಟ್ಟುಕೊಂಡು ಕಾರ್ಯ ನಿರ್ವಹಿಸುತ್ತೇವೆ‘ ಎಂದು ಅವರು ಜನರನ್ನುದ್ದೇಶಿಸಿ ಭಾವುಕರಾಗಿ ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು